ಒಬ್ಬ ವ್ಯಕ್ತಿ, ಒಂದು ಸರ್ಕಾರ, ಒಂದು ಉದ್ಯಮ ನೀತಿಯಲ್ಲಿ ಮೋದಿ ನಂಬಿಕೆ: ಕಾಂಗ್ರೆಸ್

ವದೆಹಲಿ: ಅದಾನಿ ಸಮೂಹದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಜಿ20 ಶೃಂಗಸಭೆಯ ಘೋಷಣೆಯಾಗಿದೆ. ಆದರೆ, ವಾಸ್ತವವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಒಬ್ಬ ವ್ಯಕ್ತಿ, ಒಂದು ಸರ್ಕಾರ, ಒಂದು ಉದ್ಯಮ ಸಮೂಹ’ದಲ್ಲಿ ನಂಬಿಕೆ ಹೊಂದಿರುವಂತೆ ತೋರುತ್ತಿದೆ ಎಂದು ಟೀಕಿಸಿದೆ.

 

2023ರ ಜಿ20 ಶೃಂಗಸಭೆ ಪ್ರಾರಂಭವಾಗಿದೆ, ಇಲ್ಲಿ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆಗೆ ಕಡಿವಾಣ ಹಾಕಲು ಜಾಗತಿಕ ಮಟ್ಟದ ಹಿಂದಿನ ಸಭೆಗಳಲ್ಲಿ ಮೋದಿ ಅವರು ನೀಡಿದ ಹಲವು ಭಾಷಣಗಳನ್ನು ನೆನಪಿಸಿಕೊಳ್ಳುವುದು ಉತ್ತಮ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

2018ರಲ್ಲಿ ಬ್ಯೂನಸ್‌ ಐರಿಸ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಮೋದಿ ಅವರು ಪಲಾಯನಗೈಯುವ ಆರ್ಥಿಕ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಆಸ್ತಿ ವಶಕ್ಕಾಗಿ ಒಂಬತ್ತು ಅಂಶಗಳ ಕಾರ್ಯಸೂಚಿಯನ್ನು ಮಂಡಿಸಿದ್ದರು ಎಂದು ರಮೇಶ್‌ ತಿಳಿಸಿದ್ದಾರೆ.

ನೀರವ್‌ ಮೋದಿ, ಲಲಿತ್‌ ಮೋದಿ, ಮೆಹುಲ್ ಚೋಕ್ಸಿ ಮತ್ತು ವಿಜಯ ಮಲ್ಯ ಅವರಂತಹ ಆರ್ಥಿಕ ಅಪರಾಧಿಗಳು ದೇಶದಿಂದ ಪಲಾಯನ ಮಾಡಲು ಬಿಜೆಪಿ ನೆರವಾಗಿದೆ. ಹಾಗಾಗಿ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆಗೆ ಕಡಿವಾಣ ಹಾಕಲು ಪ್ರಧಾನಿ ಕಾರ್ಯಸೂಚಿಯನ್ನು ಮಂಡಿಸುವುದು ನಗೆಪಾಟಲಿಗೀಡಾಗಿದೆ ಎಂದು ಅವರು ಆರೋಪಿಸಿದ್ದಾರೆ.

‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಜಿ20 ಶೃಂಗಸಭೆಯ ಘೋಷಣೆಯಾಗಿದೆ. ಆದರೆ, ವಾಸ್ತವವಾಗಿ ಪ್ರಧಾನಿ ಮೋದಿ ಅವರು, ‘ಒಬ್ಬ ವ್ಯಕ್ತಿ, ಒಂದು ಸರ್ಕಾರ, ಒಂದು ಉದ್ಯಮ ಸಮೂಹ’ ಎಂದು ನಂಬಿರುವಂತೆ ತೋರುತ್ತಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಆರೋಪಿಸಿದ್ದಾರೆ.

ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್, ಅದಾನಿ ಸಮೂಹದ ಮೇಲೆ ಷೇರು ಬೆಲೆಯ ಮೇಲೆ ಕೃತಕವಾಗಿ ಪ್ರಭಾವ ಬೀರಿದ ಮತ್ತು ಲೆಕ್ಕಪತ್ರಗಳ ಅಕ್ರಮದಲ್ಲಿ ತೊಡಗಿದ ಆರೋಪವನ್ನು ಹೊರಿಸಿತ್ತು. ಆದರೆ ಈ ಎಲ್ಲ ಆರೋಪಗಳನ್ನು ಅದಾನಿ ಸಮೂಹವು ತಿರಸ್ಕರಿಸಿತ್ತು.

ಇದೀಗ ಗೌತಮ್‌ ಅದಾನಿ ಸಮೂಹದ ಹಣಕಾಸು ವ್ಯವಹಾರಗಳ ಕುರಿತು ಕಾಂಗ್ರೆಸ್‌ ಪ್ರಶ್ನೆ ಮಾಡುತ್ತಿದ್ದು, ಜಂಟಿ ಸಂಸದೀಯ ಸಮಿತಿ ತನಿಖೆಯಾಗಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ಹೆಮ್ಮೆಯ ಹಿಂದೂ' ಬ್ರಿಟನ್ ಪ್ರಧಾನಿ ರಿಷಿ ಸುನಕ್ ನಾಳೆ ಅಕ್ಷರಧಾಮಕ್ಕೆ ಭೇಟಿ

Sat Sep 9 , 2023
G20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ರಿಷಿ ಸುನಕ್ ಅವರು ಭಾನುವಾರ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನವದೆಹಲಿ: G20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ರಿಷಿ ಸುನಕ್ ಅವರು ಭಾನುವಾರ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ಎಎನ್ಐ ಜೊತೆ ಮಾತನಾಡಿದ ಬ್ರಿಟನ್ ಪ್ರಧಾನಿ ರಿಷಿ, ನಾಳೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ತಮ್ಮ ‘ಹಿಂದೂ’ ಬೇರುಗಳ […]

Advertisement

Wordpress Social Share Plugin powered by Ultimatelysocial