ಕತ್ತಿಯಿಂದ ಕಡಿದು ತಂದೆ ಕೊಲೆ

ಸೀಯಾಳದ ವಿಚಾರದಲ್ಲಿ ಉಂಟಾದ ಮನಸ್ತಾಪದಿಂದ ಮಕ್ಕಳೇ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಮೀಪದ ಕರಾಯ ಗ್ರಾಮದ ಮುಗ್ಗದ ಆನೆಪಲ್ಲನಲ್ಲಿ ನಡೆದಿದೆ. ಧರ್ನಪ್ಪ ಪೂಜಾರಿ (೬೫) ಕೊಲೆಯಾದ ವ್ಯಕ್ತಿ. ಇವರನ್ನು ಮಕ್ಕಳಾದ ಮೋನಪ್ಪ ಹಾಗೂ ನವೀನ ಎಂಬವರು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆನ್ನಲಾಗಿದ್ದು, ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಧರ್ನಪ್ಪ ಪೂಜಾರಿ ಮನೆಯಲ್ಲಿದ್ದ ತೆಂಗಿನ ಮರದಿಂದ ತೆಂಗಿನಕಾಯಿ, ಸೀಯಾಳಗಳನ್ನು ತೆಗೆದು ಮಾರಾಟ ಮಾಡುತ್ತಿದ್ದು, ಇದೇ ವಿಚಾರಕ್ಕೆ ಮಕ್ಕಳಲ್ಲಿ ಆಗಾಗ ಜಗಳ ನಡೆಯುತ್ತಿತ್ತು. ನಿನ್ನೆ ಮಧ್ಯರಾತ್ರಿಯೂ ಇದೇ ವಿಚಾರಕ್ಕೆ ತಂದೆ ಮಕ್ಕಳೊಳಗೆ ಜಗಳವಾಗಿದ್ದು, ತಂದೆಗೆ ಮಕ್ಕಳು ಕತ್ತಿಯಿಂದ ಕಡಿದಿದ್ದು, ಗಂಭೀರ ಗಾಯಗೊಂಡ ಧರ್ನಪ್ಪ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬAಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಡಿಕೆಶಿ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್..!

Mon Jun 15 , 2020
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಕಾರ್ಯಕ್ರಮ ಜುಲೈ ೨ ಕ್ಕೆ ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ. ಜೂನ್ ೧೪ ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಒಟ್ಟು ಮೂರು ಬಾರಿ ಪದಗ್ರಹಣ ಕಾರ್ಯಕ್ರಮ ಮುಂದೂಡಲ್ಪಟ್ಟಿದ್ದು, ಇದೀಗ ಜುಲೈ ೨ ರಂದು ಕಾರ್ಯಕ್ರಮ ನಡೆಸಲು ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಜೂನ್ ೨೯ ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆ ಇನ್ನೂ […]

Advertisement

Wordpress Social Share Plugin powered by Ultimatelysocial