ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ರವರು ಸುದ್ದಿಗೊಷ್ಠಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು ರಾಜ್ಯದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಗೆ ಕೇಂದ್ರ ಸರ್ಕಾರ 1,325 ಕೋಟಿ ಮತ್ತು ರಾಜ್ಯಸರ್ಕಾರ 978 ಕೋಟಿ ಸೇರಿದಂತೆ ಒಟ್ಟು 2,303 ಕೋಟಿ ಬಿಡುಗಡೆಯಾಗಿದೆ. ಅದರಲ್ಲಿ 906 ಕೋಟಿ ಮೊತ್ತದ ಕಾಮಗಾರಿ ಮುಕ್ತಾಯವಾಗಿದೆ. ರಾಜ್ಯದ ಬೆಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ತುಮಕೂರು ಹಾಗೂ ಮಂಗಳೂರು ನಗರಗಳನ್ನು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಪಡಿಸಲುಉ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ‘ಸ್ಮಾರ್ಟ್ ಸಿಟಿ ಅಭಿಯಾನದಡಿಯಲ್ಲಿ ಇವುಗಳು ಪ್ರಸ್ತುತ ಕೋವಿಡ್-19 ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಜಿಲ್ಲಾಡಳಿತಕ್ಕೆ ತಾಂತ್ರಿಕ ನೆರವು ನೀಡುತ್ತಿವೆ. ಜಿಪಿಎಸ್ ತಂತ್ರಜ್ಞಾನ ಬಳಸಿ ಕೋವಿಡ್-19 ಸೋಂಕಿತ ರೋಗಿಗಳ, ಶಂಕಿತರ ಚಲನವಲನದ ಮೇಲೆ ನಿಗಾ ವಹಿಸಲಾಗುವುದು’ ಎಂದು ಅವರು ಹೇಳಿದರು. ಬೆಳಗಾವಿ, ಕಲಬುರಗಿ, ಬಳ್ಳಾರಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ ಮತ್ತು ತುಮಕೂರುಗಳಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಪ್ರತಿ ಪಾಲಿಕೆಗೆ 125 ಕೋಟಿ ರೂ.ಗಳ ಅನುದಾನದಲ್ಲಿ ಕ್ರಿಯಾಯೋಜನೆ ತಯಾರಿಸಿ, ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದರು.

 

Please follow and like us:

Leave a Reply

Your email address will not be published. Required fields are marked *

Next Post

ಭಾರತೀಯ ಯೋಧ ಹುತಾತ್ಮ

Sun Jun 14 , 2020
ದೇಶದಲ್ಲಿ ಕೊರೊನಾ ಅಟ್ಟಹಾಸದ ಜೊತೆಗೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ಥಾನದ ಪುಂಡಟ ಹೆಚ್ಚಾಗಿದು ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇಂದು ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಮತ್ತು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಷಹಪುರ್-ಕರ್ನಿ ಸೆಕ್ಟರ್ ನ ಗಡಿಯುದ್ಧಕ್ಕೂ ಶನಿವಾರ ರಾತ್ರಿ ಪಾಕಿಸ್ತಾನ ಸೈನಿಕರು ಗುಂಡು ಹಾಗೂ ಶೆಲ್ ದಾಳಿ ನಡೆಸಿದ್ದು, ಭಾರತೀಯ ಸೇನೆಯಿಂದ ತಕ್ಕ […]

Advertisement

Wordpress Social Share Plugin powered by Ultimatelysocial