ಕರ್ನಾಟಕ – ಕೇರಳ ಸಂಪರ್ಕಿಸುವ ರಸ್ತೆಗಳು ಬಂದ್

ಕರ್ನಾಟಕ – ಕೇರಳಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಮಣ್ಣು ಮುಚ್ಚಿ ಬಂದ್ ಮಾಡಿಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ಈ ನಿರ್ಧಾರವನ್ನು ತೆಗೆದುಕೊಂಡಿದೆ, ಬೆರಿಪದವು, ಪಾದೆಕಲ್ಲು, ಮುಗುಳಿ ಹಾಗೂ ಪದ್ಯಾಣ ಮೊದಲಾದ ಕಡೆಗಳಿಂದ ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಕಾಸರಗೋಡು ಗಡಿಭಾಗದ ಜನರು ತಮ್ಮ ಕೆಲಸ ಕಾರ್ಯಗಳಿಗೆ ಇದೇ ರಸ್ತೆಯ ಮೂಲಕ ಮಂಗಳೂರನ್ನು ಸಂಪರ್ಕಿಸಬೇಕು ಆದರೆ ಕೇರಳ ಸರ್ಕಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಕರಾವಳಿ,ದಕ್ಷಿಣ ಒಳನಾಡಿನಲ್ಲಿ ೫ ದಿನ ಭಾರೀ ಮಳೆ

Wed Jul 1 , 2020
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಏಳುತ್ತಿರುವುದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಧಾರವಾಡ ಸೇರಿದಂತೆ 15 ಜಿಲ್ಲೆಗಳಲ್ಲಿ ಗುಡುಡು ಸಹಿತ […]

Advertisement

Wordpress Social Share Plugin powered by Ultimatelysocial