ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಹುಲಿ ಇದ್ದಂತೆ, ಡಿ.ಕೆ.ಶಿವಕುಮಾರ್ ಸಿಂಹ ಇದ್ದಂತೆ ಇವರಿಬ್ಬರು ಇದ್ದ ಮೇಲೆ ಬೇರೆಯವರು ಯಾಕೆ..?

ಚಾಮರಾಜನಗರ, ಫೆಬ್ರವರಿ 22: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್, ಮರಳುಗಾಡಿನಲ್ಲಿದ್ದ ನಮಗೆ ತೊರೆ, ಕೆರೆ, ನದಿ ದಾಟಿಸಿ ಈಗ ಸಮುದ್ರದ ಬಳಿ ಕಾಂಗ್ರೆಸ್ ತಂದು ನಿಲ್ಲಿಸಿದೆ ಎಂದು ನಟ ಸಾಧುಕೋಕಿಲ ಕಾಂಗ್ರೆಸ್‌ ಪಕ್ಷವನ್ನು ಹೊಗಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ನಟ‌ ಸಾಧು‌ಕೋಕಿಲ, ಈಗ ನಾವು ದೊಡ್ಡ-ದೊಡ್ಡ ಬಿಲ್ಡಿಂಗ್, ಐಷರಾಮಿ ಜೀವನ, ಫ್ಲೈ ಓವರ್ ನೋಡುತ್ತಿದ್ದೇವೆ, ಆದರೆ ಸ್ವಾತಂತ್ರ್ಯ ಬಂದ ಬಳಿಕ ಇಷ್ಟು ದಿನ ನಮ್ಮನ್ನು ಕರೆತಂದಿದ್ದು ಕಾಂಗ್ರೆಸ್, ಕಾಂಗ್ರೆಸ್‌ಗೆ ಮೋಸ ಮಾಡಿದರೆ ತಂದೆ-ತಾಯಿಗೆ ಮೋಸ ಮಾಡಿದಂತೆ, ಕಾಂಗ್ರೆಸ್‌ಗೂ ಮತ್ತು ಜನರಿಗೂ ಇರುವ ಸಂಬಂಧ ಕೇವಲ ರಾಜಕೀಯದ್ದಲ್ಲ, ಹೃದಯದ ಸಂಬಂಧ ಎಂದರು.

ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಹುಲಿ ಇದ್ದಂತೆ, ಡಿ.ಕೆ.ಶಿವಕುಮಾರ್ ಸಿಂಹ ಇದ್ದಂತೆ ಇವರಿಬ್ಬರು ಇದ್ದ ಮೇಲೆ ಬೇರೆಯವರು ಯಾಕೆ..? ಕಾಂಗ್ರೆಸ್‌ನವರಿಗೆ ಮತ ಹಾಕಿ ಎಂದು ಬೇಡಬೇಕಾ? ಕಾಂಗ್ರೆಸ್‌ಗೆ ಮತ ಹಾಕುವುದು ನಮ್ಮ ಕರ್ತವ್ಯ, ಕಾಂಗ್ರೆಸ್‌ಗೆ ಮತ ಹಾಕದಿದ್ದರೆ ತಂದೆ-ತಾಯಿಗೆ ಮೋಸ ಮಾಡಿದಂತೆ ಎಂದು ಹೇಳಿದರು.

ಗುಂಡ್ಲುಪೇಟೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ, ಗಣೇಶ್ ಪ್ರಸಾದ್ ಅವರ ಕೈಯನ್ನು ಈ ಬಾರಿ ಬಲಪಡಿಸಿ, ಅತಿ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಿ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯನ್ನು ಘೋಷಿಸಿದರು.

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಭ್ರಷ್ಟ, ದರಿದ್ರ ಬಿಜೆಪಿ ಸರ್ಕಾರ ಹೋಗಲಾಡಿಸಲು ಪ್ರತಿಯೊಬ್ಬ ಮತದಾರನೂ ಕೂಡ ಪ್ರತಿಜ್ಞೆ ಮಾಡಬೇಕು. ಈ‌ ಹಿಂದೆ ನಡೆದ ಉಪ ಚುನಾವಣೆಯನ್ನು ನಾನೊಬ್ಬ ಕಾರ್ಯಕರ್ತನಾಗಿ ಕೆಲಸ ಮಾಡಿ ಗೀತಾ ಮಹದೇವಪ್ರಸಾದ್ ಅವರನ್ನು ಗೆಲ್ಲಿಸಿದ್ದೆವು. ಆ ಚುನಾವಣಾ ಗೆಲುವನ್ನು ನಾವು ಉಳಿಸಿಕೊಳ್ಳಲು ಆಗಲಿಲ್ಲ. ಈಗ ನಿಮ್ಮ ಸಮಸ್ಯೆ, ದುಃಖ ದುಮ್ಮಾನ ಕೇಳಲು ನಾವು ಇಲ್ಲಿಗೆ ಬಂದಿದ್ದು ಕಾಂಗ್ರೆಸ್ ಬಲಪಡಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಇನ್ನು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ನಿರಂಜನಕುಮಾರ್ ಯಾವುದೇ‌ ಶಾಶ್ವತ ಯೋಜನೆ ತಂದಿಲ್ಲ. ಒಂದು ಉದ್ಯೋಗ ನೀಡಿಲ್ಲ. ಆಕ್ಸಿಜನ್ ದುರಂತದಲ್ಲಿ ಯಾರಿಗೂ ಸಹಾಯ ಮಾಡಲಿಲ್ಲ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಗಣೇಶ್ ಪ್ರಸಾದ್ ಗೆಲ್ಲಿಸಬೇಕು ಎಂದು ಕರೆಕೊಟ್ಟರು. ರಾಜ್ಯದಲ್ಲಿ 141 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಪಕ್ಷ ಅಧಿಕಾರಕ್ಕೆ ಬರುತ್ತದೆ‌ ಎಂದು ನಮ್ಮ‌ ರಿಪೋರ್ಟ್ ಹೇಳುತ್ತಿದೆ, ಚಾಮರಾಜನಗರದ 4 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾತೃವಂದನಾ ಯೋಜನೆಯಡಿ :ಎರಡನೆ ಹೆರಿಗೆಯಲ್ಲಿ ಹೆಣ್ಣು ಮಗುವಾದರೆ 6 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲಾಗುವುದು :: ಸಚಿವ ಹಾಲಪ್ಪ ಆಚಾರ್

Wed Feb 22 , 2023
  ಬೆಂಗಳೂರು, ಫೆ.21: ಮಾತೃವಂದನಾ ಯೋಜನೆಯಡಿ ಎರಡನೆ ಹೆರಿಗೆಯಲ್ಲಿ ಹೆಣ್ಣು ಮಗುವಾದರೆ 6 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ. ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಡಿ.ಎಸ್.ಅರುಣ್ ಪ್ರಶ್ನೆಗೆ ಉತ್ತರಿಸಿದ ಅವರು, ಮಾತೃವಂದನಾ ಯೋಜನೆಯಡಿ ಮೊದಲ ಹೆರಿಗೆ ಸಂದರ್ಭದಲ್ಲಿ ಸರಕಾರ 5 ಸಾವಿರ ರೂಗಳನ್ನು ಎರಡು ಕಂತುಗಳಲ್ಲಿ ನೀಡುತ್ತಿದ್ದು, ಇದೀಗ ಎರಡನೆ ಹೆರಿಗೆಯಲ್ಲಿ ಹೆಣ್ಣು […]

Advertisement

Wordpress Social Share Plugin powered by Ultimatelysocial