ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ- ಸತೀಶ್ ಜಾರಕಿಹೊಳಿ

ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಉತ್ಸಾಹಿ ರಾಜಕಾರಣಿಯಾಗಿದ್ದಾರೆ. ಪಕ್ಷ ಕಟ್ಟುವ ಛಲ ಅವರಲ್ಲಿದೆ. ನಾವೆಲ್ಲರೂ ಅವರ ಜೊತೆಗೆ ಕೆಲಸ ಮಾಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದಿದ್ದು ಅಪ್ರಸ್ತುತ. ಅವರ ಸಾಮರ್ಥ್ಯ ಹಾಗೂ ಪಕ್ಷ ಸೇವೆ ನೋಡಿ ಹೈಕಮಾಂಡ್ ಅವರಿಗೆ ಜವಾಬ್ದಾರಿ ನೀಡಿದೆ. ಹಿಂದೆ ಇದ್ದ ಕಾಂಗ್ರೆಸ್ ಬೇರೆ, ಮುಂದೆ ಬರಲಿರುವ ಕಾಂಗ್ರೆಸ್ ಬೇರೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತೇವೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬಿ.ಎಲ್ ಸಂತೋಷ್ ವಿರುದ್ಧ ಸಿದ್ದರಾಮಯ್ಯ ಕಿಡಿ

Tue Jul 7 , 2020
  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗಡಿಯಲ್ಲಿ ಚೀನಾ ಸೇನೆಯಲ್ಲಿ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್ ಸಂತೋಷ್ ರಕ್ಷಣಾ ಸಚಿವರೇ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್‌ಎಸ್‌ಎಸ್ ನಾಯಕ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ […]

Advertisement

Wordpress Social Share Plugin powered by Ultimatelysocial