ಕಾಂಗ್ರೆಸ್ ಶಾಸಕರೊಬ್ಬರಿಗೆ ಕೊರೊನಾ ಪಾಸಿಟಿವ್

ಕಾಂಗ್ರೆಸ್ ಶಾಸಕ ರೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆ. ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ರವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅನಾರೋಗ್ಯದ ಹಿನ್ನಲೆಯಲ್ಲಿ ಗಂಟಲಿನ ದ್ರವವನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಪರೀಕ್ಷಾ ವರದಿ ಬಂದಿದೆ, ಕೊರೊನಾ ವೈರಸ್ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ನ ದಿಗ್ಗಜ ನಾಯಕರಿಗೆ ಕೊರೊನಾ ಭೀತಿ ಶುರುವಾಗಿದೆ. ಮಲ್ಲಿಕಾರ್ಜುನ ಖರ್ಗೆ,ಸಿದ್ದರಾಮಯ್ಯ, ಜಿ.ಪರಮೇಶ್ವರ, ಡಿಕೆಶಿ ಸೇರಿದಂತ್ತೆ ಪ್ರತಿಯೊಬ್ಬ ಕಾಂಗ್ರೆಸ್ ನಾಯಕರಿಗೆ ಕೊರೊನಾ ಭೀತಿ, ಡಿಕೆಶಿ ಪದಗೃಹಣಕ್ಕೆ ಬಂದಿದ್ದ ಡಾ.ಆರ್.ರಂಗ‌ನಾಥ್ ಕೆಪಿಸಿಸಿಯಲ್ಲಿ ನಡೆದ ಅನೇಕ ಸಭೆಗಳಲ್ಲಿ ಭಾಗಿಯಾಗಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ರಾಜ್ ಬಿ ಶೆಟ್ಟಿಗೆ ಉಡುಗೊರೆ

Mon Jul 6 , 2020
ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ  “೭೭೭ ಚಾರ್ಲಿ’ ಸಾಹಸ ಪ್ರಧಾನ ಕಾಮಿಡಿ ಚಿತ್ರವನ್ನು ಕಿರಣ್ ರಾಜ್ ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ “ಒಂದು ಮೊಟ್ಟೆಯ ಕಥೆ’ ರಾಜ್​ ಬಿ ಶೆಟ್ಟಿ ಕೂಡ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೌದು! ಭಾನುವಾರ ರಾಜ್ ಬಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ “೭೭೭ ಚಾರ್ಲಿ’ ಚಿತ್ರತಂಡ ಯ್ಯೂಟೂಬ್​ನಲ್ಲಿ ವಿಶೇಷವಾದ ವಿಡಿಯೊವೊಂದನ್ನು ಬಿಡುಗಡೆ ಮಾಡುವ ಮೂಲಕ ಗಿಫ್ಟ್ ನೀಡಿದೆ. ಅಲ್ಲದೇ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ, ಡಾ ಅಶ್ವಿನ್​ […]

Advertisement

Wordpress Social Share Plugin powered by Ultimatelysocial