ಕಾರ್ಮಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬಾಡಿಗೆ ಕೇಳಬಾರದು: ಕೇಜ್ರಿವಾಲ್..!

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಕೆಲಸ ಇಲ್ಲ. ಕೆಲವು ಕಾರ್ಮಿಕರು ಊರುಗಳಿಗೆ ತೆರಳಲಾಗದೇ ಇದ್ದಲ್ಲಿಯೇ ಉಳಿದುಕೊಂಡಿದ್ದಾರೆ ಅಂತವರಿಗೆ  ಮನೆ ಮಾಲೀಕರು ರೆಂಟ್ ಕೇಳುವಂತಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿನಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಒಂದು ತಿಂಗಳು ಬಾಡಿಗೆ ವಸೂಲು ಮಾಡಬಾರದು. ‘ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಈ ವಿಷಯದ ಬಗ್ಗೆ ಜಾಗೃತಿ ಅಭಿಯಾನವನ್ನು ಕೈಗೊಳ್ಳಬೇಕು,  ವಿಶೇಷವಾಗಿ ಕಾರ್ಮಿಕರು, ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಪ್ರದೇಶಗಳಲ್ಲಿ ಈ ಬಗ್ಗೆ ಸೂಚನೆ ನೀಡಬೇಕು. ಒಂದು ವೇಳೆ ಯಾರಿಗಾದರೂ ಬಾಡಿಗೆ ನೀಡುವಂತೆ ಒತ್ತಾಯ ಮಾಡುತ್ತಿದ್ದರೆ ಅಂಥವರು ಪೊಲೀಸ್ ನಿಯಂತ್ರಣ ಕೊಠಡಿಯ 100 ಸಂಖ್ಯೆಗೆ ಕರೆ ಮಾಡಬಹುದು. ಇಂಥ ಸಂದರ್ಭಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು’ ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಔಷಧಿ ಪಡೆಯುವವರ ವಿವರ ಸಂಗ್ರಹಿಸಲು ಸರ್ಕಾರದ ಆದೇಶ

Thu Apr 23 , 2020
ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಮೆಡಿಕಲ್ ಶಾಪ್‌ಗಳು ಹಾಗೂ ಆಸ್ಪತ್ರೆಯ ಮೆಡಿಕಲ್ಸ್ನಲ್ಲಿ ಜ್ವರ, ನೆಗಡಿ ಹಾಗೂ ಕೆಮ್ಮಿಗೆ ಔಷಧಿ ಪಡೆಯುವವರ ವಿವರ ಪಡೆಯಬೇಕು ಎಂದು ಆದೇಶಿಸಲಾಗಿದೆ. ಈ ಸಂಬಂಧ ಇಂದು ಹೊಸ ಅಧಿಸೂಚನೆ ಜಾರಿ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪ್ಯಾರಾಸಿಟಮಲ್, ಸಿರಪ್ ಹಾಗೂ ನೆಗಡಿ ಮಾತ್ರೆಗಳನ್ನು ಪಡೆದವರ ವಿವರ ಪಡೆಯಬೇಕು. ಎಲ್ಲರನ್ನ ಪತ್ತೆ ಮಾಡಲು ಅಡ್ರೆಸ್, ಫೋನ್ ನಂಬರ್ ಮತ್ತು ಲ್ಯಾಂಡ್ ಮಾರ್ಕ್ […]

Advertisement

Wordpress Social Share Plugin powered by Ultimatelysocial