ಕಾವೇರಿ ನೀರು ಹಂಚಿಕೆ ವಿವಾದ: ಇದು ಊಸರವಳ್ಳಿ ಸರ್ಕಾರ ಎಂದ ಬೊಮ್ಮಾಯಿ ಕಿಡಿ

ಬೆಂಗಳೂರು, ಸೆಪ್ಟಂಬರ್ 17: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಮಾತಿನ ಜಟಾಪಟಿ ಮುಂದುವರಿದಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೊಟ್ಟ ಮಾತು ಬದಲಾಯಿಸುತ್ತಿದೆ. ಇದು ಊಸರವಳ್ಳಿ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಸುದ್ದಿಗಾರರಿಗೆ ಕಾವೇರಿ ನೀರು ವಿವಾದ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿಕೆಯ ಪ್ರಶ್ನೆಗಳಿಗೆ ಶನಿವಾರ ಉತ್ತರಿಸಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಮೇಲೆ ತಮಿಳುನಾಡಿನ ಪ್ರಭಾವ ವಿಪರೀತ ಬೀರಿದಂತಿದೆ. ಸುಪ್ರೀಂ ಕೊರ್ಟ್ ಆದೇಶ ಆಗಿಲ್ಲ. ಸಿಡಬ್ಲುಎಂಎ ಸಭೆ ಆಗಿಲ್ಲ ಆದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ಧೋಖಾ ಮಾಡಿದೆ.

ಜನರಿಗೆ ಅನ್ಯಾಯ ಮಾಡಿ ಸರ್ಕಾರದ ವಿರುದ್ಧ ನಮ್ಮ ಪಕ್ಷದ ವತಿಯಿಂದ ತಿವ್ರವಾದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಆರಂಭದಲ್ಲಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅವರು ಹೇಳಿದ ಮಾರನೇ ದಿನವೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀರು ಹರಿಸಿಸಿದ್ದಾರೆ. ಸರ್ಕಾರ ನೀರು ಬಿಡಲು ತೀರ್ಮಾನ ಮಾಡುವುದಾದರೆ ಸರ್ವ ಪಕ್ಷದ ಸಭೆ ಕರೆಯುವ ಅಗತ್ಯ ಏನಿತ್ತು ಎಂದು ಅವರು ಪ್ರಶ್ನೆ ಮಾಡಿದರು.

ಸಿಎಂ ಸರ್ವಪಕ್ಷದ ಸಭೆ ಕರೆದು ನೀರು ಬಿಡುವುದಿಲ್ಲ ಎಂದು ಹೇಳುತ್ತಾರೆ. ಡಿಸಿಎಂ ನೀರು ಬಿಡುತ್ತಾರೆ. ಇದು ಊಸರವೊಳ್ಳಿ ಸರ್ಕಾರ ಎಂದು ಜರಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ಜನತೆಗೆ ದ್ರೋಹ ಬಗೆದು ತಮಿಳುನಾಡಿಗೆ ನೀರು ಬಿಡುತ್ತಿರುವುದು ಕರಾಳ ನಿರ್ಣಯ ಎಂದು ಬೊಮ್ಮಾಯಿಯವರು ವಾಗ್ದಾಳಿ ನಡೆಸಿದರು.

ಸರ್ಕಾರಕ್ಕೆ ಧಮ್ಮು ಇದ್ದರೆ ಕೋರ್ಟ್‌ನಲ್ಲಿ ವಾದಿಸಲಿ

ಬಿಜೆಪಿಯವರಿಗೆ ಪ್ರಧಾನಿ ಭೇಟಿ ಮಾಡಿ ಮಾತನಾಡುವ ಧಮ್ ಇಲ್ಲ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಈ ಸರ್ಕಾರಕ್ಕೆ ನಿಜವಾದ ತಾಕತ್ತು, ಧಮ್ಮು ಇದ್ದರೆ ನೀರು ಬಿಡುತ್ತಿರಲಿಲ್ಲ. ನೀರು ಬಿಟ್ಟು ತಾಕತ್ತು ಧಮ್ಮಿನ ಬಗ್ಗೆ ಮಾತನಾಡುತ್ತಾರೆ‌. ನಿಮಗೆ ತಾಕತ್ತು, ಧಮ್ಮು ಇದ್ದರೆ ತಮಿಳುನಾಡಿಗೆ ನೀರು ಬಿಡದೇ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥ ವಾದ ಮಾಡಿ ರಾಜ್ಯದ ಹಿತ ಕಾಪಾಡಲಿ ಎಂದು ಅವರು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಮಧ್ಯಸ್ಥಿಕೆ ವಹಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ರಾಜ್ಯದ ಎಂಪಿಗಳು ಪ್ರಧಾನಿಯನ್ನು ಭೇಟಿ ಮಾಡಿದರೂ ಏನೂ ಪ್ರಯೋಜನ ಇಲ್ಲ. ಇವರಿಗೆ ಓಟ್ ಹಾಕಿದ ಕಾವೇರಿ ಕೊಳ್ಳದ ಮಕ್ಕಳು ಪಶ್ಚಾತಾಪ ಪಡುತ್ತಿದ್ದಾರೆ‌. ಸುಪ್ರೀಂ ಕೋರ್ಟ್ ಮತ್ತು ತಮಿಳುನಾಡಿನ ಸಿಎಂ ಜೊತೆ ಮಾತುಕತೆ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಸದ್ಯ ತಮಿಳುನಾಡು ಕಾವೇರಿ ನೀರನ್ನು ಹರಿಸಲು ಕರ್ನಾಟಕಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿದೆ. ಇದರ ವಿಚಾರಣೆ ಇದೇ ವಾರ ನಡೆಯಲಿದೆ. ಈ ಸಂಬಂಧ ಸೂಕ್ತ ವಾದ ಮಂಡಿಸಲುವಂತೆ ವಿಪಕ್ಷಗಳು ಸರ್ಕಾರಕ್ಕೆ ತಿಳಿಸಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

Narendra Modi: ಜನ್ಮದಿನದಂದು ಮೆಟ್ರೋದಲ್ಲಿ ಮೋದಿ ಸಂಚಾರ; ಸಂಸ್ಕೃತದಲ್ಲಿ ಶುಭಕೋರಿದ ಯುವತಿ

Sun Sep 17 , 2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾವುದಾದರೂ ಮೆಟ್ರೋ ಯೋಜನೆಗಳಿಗೆ ಚಾಲನೆ ನೀಡುವುದಿದ್ದರೆ, ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸುತ್ತಾರೆ. ಅಷ್ಟೇ ಅಲ್ಲ, ಮೆಟ್ರೋ ಪ್ರಯಾಣದ ವೇಳೆ ಯುವಕ, ಯುವತಿಯರು ಸೇರಿ ಎಲ್ಲ ಪ್ರಯಾಣಿಕರ ಜತೆ ಮಾತುಕತೆ ನಡೆಸುತ್ತಾರೆ. ಭಾನುವಾರವೂ (ಸೆಪ್ಟೆಂಬರ್‌ 17) ನರೇಂದ್ರ ಮೋದಿ (Narendra Modi) ಅವರು ದೆಹಲಿ ಏರ್‌ಪೋರ್ಟ್‌ ಮೆಟ್ರೋ ಎಕ್ಸ್‌ಪ್ರೆಸ್‌ ಲೈನ್‌ಗೆ ಚಾಲನೆ ನೀಡುವ ಮೊದಲು ಮೋದಿ ಅವರು ದೆಹಲಿ ಮೆಟ್ರೋದಲ್ಲಿ (Delhi Metro) ಸಂಚರಿಸಿದರು. ದ್ವಾರಕಾ […]

Advertisement

Wordpress Social Share Plugin powered by Ultimatelysocial