ಕಾವೇರಿ ವಿವಾದ: ಇಂದು ಸಂಜೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ಸರ್ವಪಕ್ಷಗಳ ಒಮ್ಮತದ ತೀರ್ಮಾನ ಎಂದ ಡಿ ಕೆ ಶಿವಕುಮಾರ್

ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿ: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ಜಲ ವಿವಾದ ಸಂಬಂಧ ಕರ್ನಾಟಕದ ಮುಂದಿನ ಹೆಜ್ಜೆ ಕುರಿತು ತೀರ್ಮಾನಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಸರ್ವಪಕ್ಷಗಳ ನಾಯಕರು, ಕೇಂದ್ರ ಸಚಿವರು, ಸಂಸದರು, ಕಾವೇರಿ ಜಲಾನಯನ ಪ್ರದೇಶಗಳ ಶಾಸಕರ ಸಭೆ ಕರೆದಿದ್ದರು. ಸಭೆಯಲ್ಲಿ ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ರಾಜಕೀಯ ಮರೆತು ಎಲ್ಲರೂ ಒಗ್ಗಟ್ಟಾಗಿದ್ದೇವೆ. ಇಂದು ಸಂಜೆ 4 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ಎಲ್ಲರೂ ಒಮ್ಮತದಿಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
Please follow and like us:

tmadmin

Leave a Reply

Your email address will not be published. Required fields are marked *

Next Post

ಕೆಲವು ರೈಲುಗಳು ಮೊದಲು ಜರ್ಕ್ ಮಾಡಿ ನಂತರ ಚಲಿಸುತ್ತವೆ. ಇದಕ್ಕೆ ಕಾರಣವೇನು ಗೊತ್ತಾ?

Wed Sep 20 , 2023
ನವದೆಹಲಿ: ಭಾರತದಲ್ಲಿ ಸುಮಾರು 125 ಕೋಟಿ ಜನರು ವಾಸಿಸುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ದೂರ ಪ್ರಯಾಣಕ್ಕಾಗಿ ರೈಲುಗಳನ್ನು ಬಳಸುತ್ತಾರೆ. ಆದರೆ, ಕೆಲವು ರೈಲುಗಳು ಚಲಿಸುವ ಮೊದಲು ಜೊಲ್ಟ್ ನೀಡಿ ನಂತರ ಮುಂದಕ್ಕೆ ಚಲಿಸುತ್ತವೆ ಎಂಬುದನ್ನು ನೀವು ಎಂದಾದರೂ ಅರಿತುಕೊಂಡಿದ್ದೀರಾ.   ಇದು ಪ್ರತಿ ರೈಲಿನಲ್ಲಿ ಆಗುವುದಿಲ್ಲ, ಕೆಲವು ರೈಲುಗಳಲ್ಲಿ ಮಾತ್ರ ನಡೆಯುತ್ತದೆ. ಈ ರೈಲುಗಳ ವಿಶೇಷತೆ ಏನು ಎಂಬುದನ್ನು ನೋಡೋಣ ಬನ್ನಿ… ವಾಸ್ತವವಾಗಿ, ಈ ಆಘಾತದ ಹಿಂದೆ ರೈಲಿನ ಕೋಚ್ ಇದೆ. […]

Advertisement

Wordpress Social Share Plugin powered by Ultimatelysocial