ಕೆಲಸದ ಅವಧಿಯನ್ನು 9ರಿಂದ 12 ಗಂಟೆಗೆ ಹೆಚ್ಚಿಸುವ ಕಾಯ್ದೆಗೆ ವಿಧಾನಸಭೆ ಅಂಗೀಕಾರ

ಬೆಂಗಳೂರು: ಕೆಲಸದ ಅವಧಿಯನ್ನು 9ರಿಂದ 12 ಗಂಟೆಗೆ ಹೆಚ್ಚಿಸುವ ಕಾಯ್ದೆಗೆ ವಿಧಾನಸಭೆ ಬುಧವಾರ ಅಂಗೀಕಾರ ನೀಡಿದೆ.

ವಾರದಲ್ಲಿ ಗರಿಷ್ಠ 48 ಗಂಟೆಗಳಿಗೆ ಒಳಪಟ್ಟು ಯಾವುದೇ ದಿನದಲ್ಲಿ ವಿರಾಮ ಮಧ್ಯಾಂತರಗಳನ್ನು ಒಳಗೊಂಡಂತೆ, ಪ್ರಸ್ತುತ ಇರುವ ಕೆಲಸದ ಅವಧಿಯನ್ನು 9ರಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಮಸೂದೆ -2023ರಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ.

ದೈನಂದಿನ ಗರಿಷ್ಠ ಕೆಲಸದ ಅವಧಿ ಹೆಚ್ಚಿಸಲು ಅನುಕೂಲವಾಗುವಂತೆ ಕಾರ್ಖಾನೆಗಳ ಯಾವುದೇ ಗುಂಪು ಅಥವಾ ವರ್ಗ, ಕಾರ್ಮಿಕನ ಒಟ್ಟು ಕೆಲಸದ ಅವಧಿಯನ್ನು ವಿರಾಮ ಇಲ್ಲದೆ 6 ಗಂಟೆಗಳ ವರೆಗೂ ವಿಸ್ತರಿಸಬಹುದಾಗಿದೆ ಎಂದು ಮಸೂದೆಯಲ್ಲಿ ವಿವರಿಸಲಾಗಿದೆ.

ಅವಧಿ ಮೀರಿದ ಕೆಲಸದ ಸಂದರ್ಭದಲ್ಲಿ ಸಾಮಾನ್ಯ ದರಕ್ಕಿಂತ ದುಪ್ಪಟ್ಟು ದರದಲ್ಲಿ ಕೆಲಸಗಾರನಿಗೆ ವೇತನ ಪಾವತಿಸುವ ಜತೆಗೆ ಕೆಲಸದ ವೇಳೆಯನ್ನು ನಿಗದಿ ಮಾಡುವುದಕ್ಕೂ ಕಾಯ್ದೆಯಲ್ಲಿ ಅವಕಾಶವಿದೆ. ರಾತ್ರಿ ಪಾಳಿ ಯಲ್ಲಿ ದುಡಿಯಲು ಮಹಿಳೆಯರಿಗೂ ಅವಕಾಶ ನೀಡಲಾಗಿದ್ದು, ಆಸಕ್ತ ಮಹಿಳೆಯರ ಲಿಖೀತ ಒಪ್ಪಿಗೆ ಅಗತ್ಯ ಎಂದು ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿ ಮಹಾನಗರ ಪಾಲಿಕೆಯಲ್ಲಿ ರೋಷಾವೇಷ: ಬಿಜೆಪಿ-ಎಎಪಿ ನಡುವೆ ಘರ್ಷಣೆ!

Thu Feb 23 , 2023
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಸಭೆಯಲ್ಲಿ ಬಿಜೆಪಿ ನಾಯಕರು ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಹೊಸದಾಗಿ ಚುನಾಯಿತ ಮೇಯರ್ ಶೆಲ್ಲಿ ಒಬೆರಾಯ್ ಆರೋಪಿಸಿದ್ದಾರೆ. ದೆಹಲಿ ಮಹಾನಗರ ಪಾಲಿಕೆಯ ಸಭೆ ಬುಧವಾರ ನಡೆದಿದ್ದು, ಎಎಪಿಯ ಶೆಲ್ಲಿ ಒಬೆರಾಯ್ ಮೇಯರ್ ಆಗಿ ಆಯ್ಕೆಯಾದರು.  ಅಧ್ಯಕ್ಷತೆಯನ್ನು ವಹಿಸಿಕೊಂಡ ನಂತರ ಶೆಲ್ಲಿ ಒಬೆರಾಯ್ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಪುನಃ ಕರೆಯಲಾಯಿತು. ಈ ವೇಳೆ ಬಿಜೆಪಿ ಮತ್ತು ಎಎಪಿ ನಾಯಕರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಸದಸ್ಯರು ನೀರಿನ […]

Advertisement

Wordpress Social Share Plugin powered by Ultimatelysocial