ಕೇರಳದಲ್ಲಿ ನಿಫಾ ವೈರಸ್ ನಿಂದ ಇಬ್ಬರ ಸಾವು: ಕೇಂದ್ರ ಆರೋಗ್ಯ ಸಚಿವ

ಕೇರಳದ ಕೊಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ದೃಢಪಡಿಸಿದ್ದಾರೆ. ಕೋಯಿಕ್ಕೋಡ್: ಕೇರಳದ ಕೊಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ದೃಢಪಡಿಸಿದ್ದಾರೆ.
ನಿಫಾ ವೈರಾಣು ಮತ್ತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ತಜ್ಞರ ತಂಡವನ್ನು ಕೇಂದ್ರದಿಂದ ಕಳಿಸಲಾಗಿದ್ದು ಈ ತಂಡ ಕೇರಳ ಸರ್ಕಾರಕ್ಕೆ ವೈರಾಣು ನಿಯಂತ್ರಣದಲ್ಲಿ ಸಹಾಯ ಮಾಡಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. “ಕೋಝಿಕ್ಕೋಡ್ನಲ್ಲಿ ವರದಿಯಾದ ಎರಡು ಸಾವುಗಳು ನಿಪಾ ವೈರಸ್ನಿಂದ ಸಂಭವಿಸಿವೆ ಎಂದು ದೃಢಪಡಿಸಲಾಗಿದೆ” ಎಂದು ಮಾಂಡವಿಯಾ ಸುದ್ದಿಗಾರರಿಗೆ ತಿಳಿಸಿದರು. ನಮ್ಮ ತಜ್ಞರ ತಂಡ ಕೇರಳ ತಲುಪಿದೆ ಎಂದು ಮಾಹಿತಿ ನೀಡಿದ್ದಾರೆ. ಕೇರಳದಲ್ಲಿನ ಸ್ಥಿತಿಗತಿಗಳ ಬಗ್ಗೆ ಅಲ್ಲಿನ ಆರೋಗ್ಯ ಸಚಿವರಾದ ವೀಣಾ ಜಾರ್ಜ್ ಅವರಿಂದ ಮಾಹಿತಿ ಪಡೆಯಲಾಗಿದೆ ಎಂದು ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ. ಕೇರಳದಿಂದ ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದಾದ ಝೂನೋಟಿಕ್ ವೈರಸ್ ನಿಫಾ ವೈರಸ್ ಸೋಂಕಿಗೆ ಒಳಗಾಗಿರುವ ಶಂಕಿತ ಇನ್ನೂ ನಾಲ್ವರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್ಐವಿ) ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
Please follow and like us:

tmadmin

Leave a Reply

Your email address will not be published. Required fields are marked *

Next Post

ಕುಸಿದ ಮಾಯಾವತಿ ಪ್ರಭಾವ: ದಲಿತ ಮತಬ್ಯಾಂಕ್‌ ಮೇಲೆ ಕಾಂಗ್ರೆಸ್‌ ಕಣ್ಣು- ಉತ್ತರ ಪ್ರದೇಶದಿಂದ ಮಲ್ಲಿಕಾರ್ಜುನ ಖರ್ಗೆ ಕಣಕ್ಕೆ?

Wed Sep 13 , 2023
ನವದೆಹಲಿ, ಸೆಪ್ಟೆಂಬರ್‌ 13: ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಸಿದ್ದತೆ ನಡೆಸಿವೆ. ದೇಶದ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ಮೇಲೆ ರಾಷ್ಟ್ರೀಯ ಪಕ್ಷಗಳ ಕಣ್ಣು ನೆಟ್ಟಿದೆ. ಪ್ರಧಾನಿ ಮೋದಿ ಅವರು ವಾರಣಾಸಿಯಿಂದ ಮತ್ತೆ ಸ್ಪರ್ಧಿಸುವ ನಿರೀಕ್ಷೆ ಇದೆ. ಅವರ ಪ್ರಭಾವವನ್ನು ತಗ್ಗಿಸಲು ಕಾಂಗ್ರೆಸ್‌ ಮುಂದಾಗಿದೆ. ಆ ಹಿನ್ನೆಲೆಯಲ್ಲಿ ದಲಿತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರನ್ನು ಯುಪಿಯಿಂದ ಕಣಕ್ಕಿಳಿಸಲು […]

Advertisement

Wordpress Social Share Plugin powered by Ultimatelysocial