ಕೇರಳದಲ್ಲಿ ಪತ್ತೆಯಾಗಿರುವ ನಿಫಾ ವೈರಾಣು ಬಾಂಗ್ಲಾದೇಶದ್ದು, ಕಡಿಮೆ ಸಾಂಕ್ರಾಮಿಕ, ಮರಣದ ಪ್ರಮಾಣ ಹೆಚ್ಚು!

ಕೇರಳದಲ್ಲಿ ಪತ್ತೆಯಾಗಿರುವ ನಿಫಾ ವೈರಾಣು ಬಾಂಗ್ಲಾದೇಶದ್ದಾಗಿದ್ದು, ಕಡಿಮೆ ಸಾಂಕ್ರಾಮಿಕ ಎಂದು ತಿಳಿದುಬಂದಿದೆ. ತಿರುವನಂತಪುರ: ಕೇರಳದಲ್ಲಿ ಪತ್ತೆಯಾಗಿರುವ ನಿಫಾ ವೈರಾಣು ಬಾಂಗ್ಲಾದೇಶದ್ದಾಗಿದ್ದು, ಕಡಿಮೆ ಸಾಂಕ್ರಾಮಿಕ ಎಂದು ತಿಳಿದುಬಂದಿದೆ. ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಪುಣೆಯ ತಂಡ ಕೇರಳಕ್ಕೆ ಆಗಮಿಸಲಿದ್ದು, ಮೊಬೈಲ್ ಲ್ಯಾಬ್ ನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಸ್ಥಾಪಿಸಿ ನಿಫಾ ವೈರಾಣು ಸೋಂಕು ಮಾದರಿಗಳನ್ನು ಸಂಗ್ರಹಿಸಲಿದೆ ಎಂದು ಕೇರಳ ರಾಜ್ಯ ಸರ್ಕಾರ ಹೇಳಿದೆ.
ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಾಲ್ವರಿಗೆ ನಿಫಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ವಿಧಾನಸಭೆಯಲ್ಲಿ ನಿಫಾ ಸೋಂಕಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್, ಕೇರಳದಲ್ಲಿ ಕಂಡುಬರುವ ವೈರಾಣು ಮಾದರಿ ಬಾಂಗ್ಲಾದೇಶದ ರೂಪಾಂತರವಾಗಿದ್ದು ಅದು ಮನುಷ್ಯರಿಂದ ಮನುಷ್ಯನಿಗೆ ಹರಡುತ್ತದೆ ಮತ್ತು ಇದು ಕಡಿಮೆ ಸಾಂಕ್ರಾಮಿಕವಾಗಿದ್ದರೂ ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿದೆ ಎಂದು ಹೇಳಿದ್ದಾರೆ.
Please follow and like us:

tmadmin

Leave a Reply

Your email address will not be published. Required fields are marked *

Next Post

ಶೋಲೆ ಸಿನಿಮಾದ ಬೀರಬಲ್ ಖ್ಯಾತಿಯ ನಟ ಸತೀಂದರ್ ಕುಮಾರ್ ಖೋಸ್ಲಾ ನಿಧನ

Wed Sep 13 , 2023
ಮುಂಬೈ, ಸೆ.13- ಹೃದಯಾ ಘಾತದಿಂದ ಮುಂಬೈನ ಕೋಕಿಲಾ ಬೇನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಬಾಲಿವುಡ್‍ನ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ (84) ನಿಧನರಾಗಿದ್ದು ಇಂದು ಅವರ ಅಂತ್ಯಕ್ರಿಯೆ ನೆರವೇರಿದೆ. ಸತೀಂದರ್ ಅವರ ನಿಧನಕ್ಕೆ ಬಾಲಿವುಡ್‍ನ ಹಲವು ನಟರು ಹಾಗೂ ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ. 1960, 70ರಲ್ಲಿ ತಮ್ಮ ಹಾಸ್ಯದ ಮೂಲಕ ಮೆಹಬೂಬ್, ಜಗದೀಪ್‍ರೊಂದಿಗೆ ಬಾಲಿವುಡ್ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದ ಸತೀಂದರ್ ಕುಮಾರ್ ಖೋಸ್ಲಾ ಅವರು ಅಮಿತಾಬ್ ಬಚ್ಚನ್ ಹಾಗೂ ಧರ್ಮೇಂದ್ರ […]

Advertisement

Wordpress Social Share Plugin powered by Ultimatelysocial