“ಕೈ ನಾಯಕಿ” ಬಂಧನ ಖಂಡಿಸಿ ಕಾಂಗ್ರೆಸ್‌ ನಾಯಕರ ಮೆರವಣಿಗೆ…!ಬಿಜೆಪಿ ಕೊಲೆಗಡುಕ ಮನಸ್ಸಿಗೆ ಸಾಕ್ಷಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ..!

ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಮತ್ತು ರೈತರ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಕಾಂಗ್ರೆಸ್‌ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಬೆಂಗಳೂರಿನ  ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಪಂಜಿನ ಮೆರವಣಿಗೆ ನಡೆಸಲು ಮುಂದಾದ ಕಾಂಗ್ರೆಸ್‌ ನಾಯಕರನ್ನು  ಇಂಡಿಯಾನ್‌ ಎಕ್ಸ್ ಪ್ರೆಸ್‌ ವೃತ್ತದ ಬಳಿ ಪೊಲೀಸರು ತಡೆದು ಮೆರವಣಿಗೆಯಲ್ಲಿದ್ದ ಕೈ ನಾಯಕರನ್ನು ವಶಪಡಿಸಿಕೊಂಡಿದ್ದಾರೆ.

 ಉತ್ತರಪ್ರದೇಶದಲ್ಲಿ ರೈತರ  ಮೇಲೆ ನಡೆದ ಹಿಂಸಾಚಾರವನ್ನು ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದವರು ಪ್ರತಿಭಟನೆ ಜಾಥಗಳನ್ನು ನಡೆಸುತ್ತಿದ್ದಾರೆ..ಪ್ರತಿಭಟನೆಯಲ್ಲಿ  ಕಾಂಗ್ರೆಸ್‌ ನಾಯಕರು ,ಕಾರ್ಯಕರ್ತರು, ಬಿಜೆಪಿ ವಿರುದ್ಧ ಭಿತ್ತಿ ಪತ್ರವನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು…ಬಳಿಕ ಕಾಂಗ್ರೆಸ್‌ ನಾಯಕ ನಿಯೋಗ ರಾಜ್ಯಪಾಲರಾದ ಥಾವರಚಂದ್‌ ಗೆಹಲೋತ್‌ ರವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು…

ಉತ್ತರ  ಪ್ರದೇಶದಲ್ಲಿ ನಡೆದ ಘಟನೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಖಾತೆ ಸಚಿವ ಅಜಯ್‌ ಮಿಶ್ರಾ ಮತ್ತು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಡಿ.ಕೆ ಶಿವಕುಮಾರ್‌ ರಾಜ್ಯಪಾಲರಿಗೆ ಒತ್ತಾಯಿಸಿದರು. ದೇಶದಲ್ಲಿ ನೀಚ ರಾವಣ ಸರ್ಕಾರ ಆಡಳಿತ ನಡೆಸುತ್ತಿದೆ. ಹೀಗಾಗಿ ಅನ್ನದಾತರು ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆಗ್ರಹಿಸಿದರು… ಉತ್ತರ ಪ್ರದೇಶದಲ್ಲಿ  ನಡೆದ ಘಟನೆ ಇದು ಕೇವಲ ನಾಲ್ವರು ರೈತರ ಹತ್ಯೆ ಅಲ್ಲ ಇದು ರೈತ ಸಮುದಾಯದ ಕೊಲೆ ,ಪ್ರಜಾತಂತ್ರ ವ್ಯವಸ್ಥೆಯ ಕೊಲೆ .ಬಲಿಯಾದ ರೈತರ ಕುಟುಂಬವನ್ನು ಭೇಟಿ ಮಾಡಲು ಮುಂದಾದ ಕಾಂಗ್ರೆಸ್‌ ಪಕ್ಷದ ನಾಯಕಿಯನ್ನು  ಉತ್ತರ ಪ್ರದೇಶದ ಪೊಲೀಸರು ಬಂಧಿಸಿರುವುದು ಖಂಡನೀಯ .ಒಬ್ಬ ಪುರುಷ ಪೊಲೀಸ್‌ ಅಧಿಕಾರಿ ಪ್ರಿಯಾಂಕಾ ಗಾಂಧಿ ಮೈ ಮೇಲೆ ಕೈ ಹಾಕಿ ಎಳೆದಾಡಿದ್ದಾರೆ ಮಹಿಳೆಯರಿಗೆ ಮಾಡಿದ ಅಪಮಾನವಿದು ಎಂದು ಡಿಕೆ ಶಿವಕುಮಾರ್‌  ಕಿಡಿಕಾರಿದ್ದಾರೆ..ಇನ್ನು ಕೃಷಿ ಕರಾಳ ಕಾಯ್ದೆಗಳನ್ನು ವಿರೋಧಿಸಿ 10 ತಿಂಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕರೆದು ಮಾತನಾಡಿಸುವ ಕನಿಷ್ಠ ಸೌಜನ್ಯವೂ ಸಹ ಕೇಂದ್ರ  ಸರ್ಕಾರಕ್ಕೆ ಇಲ್ಲ ಎಂದು  ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿದ್ರು.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನ ಮಾಜಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ಉತ್ತರ ಪ್ರದೇಶದಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಿದರು… ಉತ್ತರ ಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣವನ್ನು ಬಿಜೆಪಿ  ಪಕ್ಷವು ಕೊಲೆಗಡುಕ ಮನಸ್ಸಿಗೆ ಸಾಕ್ಷಿಯಾಗಿದೆ ಎಂದು  ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್‌ ಮೂಲಕ ಕಿಡಿಕಾರಿದ ವಿಕ್ಷನಾಯಕ ಸಿದ್ದರಾಮಯ್ಯ ಉತ್ತರ ಪ್ರದೇಶದ ಆದಿತ್ಯನಾಥ ಗೂಂಡಾ ರಾಜ್ಯದಲ್ಲಿ ದಲಿತರು ,ರೈತರು ,ಮಹಿಳೆಯರು.,ಮತ್ತು ಬಡವರ ಮಾನ ಪ್ರಾಣ ಯಾವುದೂ ಸುರಕ್ಷಿತ ಅಲ್ಲ ಸಂವಿಧಾನವೇ ಕುಸಿದು ಬಿದ್ದಿರುವ ಸ್ಥಿಯಲ್ಲಿ ಇದೆ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಅಲ್ಲಿನ  ಬಿಜೆಪಿ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.ಪ್ರತಿರೋಧ  ಭಿನ್ನಭಿಪ್ರಾಯ ಸಹಿಸದ ಬಿಜೆಪಿ ಸರ್ಕಾರ ತನ್ನ  ಮನಸ್ಥಿತಿಯನ್ನು ಬೆತ್ತಲು ಮಾಡಿಕೊಳ್ಳುತ್ತಿದೆ.ರೈತರು ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಹೊರಟ ಪ್ರಿಯಾಂಕ ಗಾಂಧಿಯನ್ನು ಬಂಧಿಸಿರುವುದು ಖಂಡನೀಯ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು….. 

Please follow and like us:

Leave a Reply

Your email address will not be published. Required fields are marked *

Next Post

ಆರ್‌ಎಸ್‌ಎಸ್‌ ಬಗ್ಗೆ ನಟ  ಜಗ್ಗೇಶ್ ಅವರ ಟ್ವಿಟ್..

Wed Oct 6 , 2021
ನಟ-ರಾಜಕಾರಣಿ ಜಗ್ಗೇಶ್ ಅವರು ಸಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆರ್‌ಎಸ್‌ಎಸ್‌ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಆರ್‌ಎಸ್‌ಎಸ್ ಅಂದ್ರೆ ಏನೆಂದು ವಿವರಿಸುವ ಪ್ರಯತ್ನ ಮಾಡಿದ್ದಾರೆ. ”ನಾನು ಕಂಡ ಅರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ, ಕೊರೊನಾ ಸಂದರ್ಭವಾಗಲಿ, ನೆರೆ ಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿಧ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಇಂಥ ಸ್ವಾರ್ಥ ಜಗದಲ್ಲಿ […]

Advertisement

Wordpress Social Share Plugin powered by Ultimatelysocial