ಕೊರೊನಾಗೆ ಮೊದಲ ರಾಜಕೀಯ ಮುಖಂಡನ ಬಲಿ

ಕೊರೋನಾ ವೈರಸ್​​ನಿಂದ ಗುಜರಾತ್​ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಮೃತಪಟ್ಟಿದ್ದಾರೆ. ದೇಶಾದ್ಯಂತ ಲಾಕ್​ಡೌನ್​ ಘೋಷಿಸಿರುವುದರಿಂದ ಅನೇಕರಿಗೆ ಆಹಾರಇಲ್ಲದೆ ಪರದಾಡುತ್ತಿದ್ದಾರೆ. ಅಂಥವರಿಗೆ ಆಹಾರ ವಿತರಿಸಲು ಹೋಗಿದ್ದ ಬದ್ರುದ್ದೀನ್ ಶೇಖ್ ರಲ್ಲಿ ಕೊರೋನಾ ಲಕ್ಷಣಗಳು ಕಂಡುಬಂದಿತ್ತು. ಬಡವರಿಗೆ ಆಹಾರ ವಿತರಿಸುವಾಗಲೇ ಯಾರಿಂದಲೋ ಬದ್ರುದ್ದೀನ್ ಶೇಖ್​ಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆ ಗುಜರಾತ್​ನ ಅಹಮದಾಬಾದ್​ನಲ್ಲಿರುವ ಎಸ್​ವಿಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾಗೆ ಬಲಿಯಾದ ಮೊದಲ ರಾಜಕಾರಣಿ ಬದ್ರುದ್ದೀನ್ ಶೇಖ್ ಆಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಶಕ್ತಿ ಸಿನ್ಹಾ ಗೋಹಿಲ್ ಖಚಿತಪಡಿಸಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಸಂಸದ ಸಂಜೀವ್ ಕುಮಾರ್ ಕುಟುಂಬದ ಆರು ಜನರಿಗೆ ಕೋವಿಡ್ ದೃಢ

Mon Apr 27 , 2020
ಹೈದರಾಬಾದ್: ಆಂಧ್ರಪ್ರದೇಶ ಸಂಸದ ಡಾ. ಸಂಜೀವ್ ಕುಮಾರ ಅವರ ಕುಟುಂಬದ ಆರು ಜನರಿಗೆ ಕೋವಿಡ್-೧೯ ಸೋಂಕು ತಗಲಿರುವುದು ಧೃಢಪಟ್ಟಿದೆ. ಅವರ ೮೦ವರ್ಷದ ತಂದೆ, ಹೆಂಡತಿ, ಇಬ್ಬರು ಸಹೋದರರು ಹಾಗೂ ಇನ್ನಿಬ್ಬರು ಸೋಂಕಿತರಾಗಿದ್ದಾರೆ. ಈ ಸಂಬಂಧ ಸುದ್ಧಿಗಾರರೊಂದಿಗೆ ಮಾತನಾಡಿದ ಸಂಜೀವ್ ಕುಮಾರ ಸೋಂಕು ಧೃಢಪಟ್ಟಿರುವ ಆರು ಜನರೂ ಸ್ಥಿರವಾಗಿದ್ದಾರೆ. ಅವರಿಗೆ ಯಾವುದೇ ತೊಂದರೆ ಕಾಣಿಸಿಕೊಂಡಿಲ್ಲ. ಎಲ್ಲರೂ ಕರ್ನೂಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಯಮದಂತೆ ಪ್ರತ್ಯೇಕ ವಾಸದಲ್ಲಿದ್ದಾರೆ. ನಾವು ಮುನ್ನೆಚ್ಚರಿಕೆ ಕ್ರಮಗಳನ್ನು […]

Advertisement

Wordpress Social Share Plugin powered by Ultimatelysocial