ಕೊರೊನಾದಿಂದ ಮುಕ್ತನಾದ ಹೆಚ್‌ಐವಿ ಸೋಂಕಿತ

ಅಹಮದಾಬಾದ್: ಏಡ್ಸ್ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಪವಾಡ ರೀತಿಯಲ್ಲಿ ಕೊರೊನಾ ಸೋಂಕಿನಿಂದ ಪಾರಾಗಿದ್ದಾನೆ. ಅಹಮದಾಬಾದ್‌ನ ಗ್ರಾಮದ ೨೭ ವರ್ಷದ ವ್ಯಕ್ತಿ ಕಳೆದ ಕೆಲ ವರ್ಷಗಳಿಂದ ಹೆಚ್‌ಐವಿ  ಸೋಂಕಿನಿಂದ ಬಳಲುತ್ತಿದ್ದರು. ಇವರಿಗೆ ಮಹಾಮಾರಿ ಕೊರೊನಾ ವೈರಸ್ ಕೂಡ ತಗುಲಿದ್ದು, ಸಾವನ್ನಪ್ಪುವುದು ಖಚಿತ ಎಂದು ಹೇಳಲಾಗ್ತಿತ್ತು. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ದಾಖಲಾಗಿ ಅವರು ಡೆಡ್ಲಿ ವೈರಸ್‌ನಿಂದ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ಬಂದಿದ್ದಾರೆ. ಈ ವೇಳೆ, ಸ್ಥಳೀಯ ಜನರು ಅವರ ಮೇಲೆ ಹೂಮಳೆ ಸುರಿದಿದ್ದಾರೆ. ಇದೇ ವಿಷಯವಾಗಿ ಮಾತನಾಡಿರುವ ಸರ್ಕಾರಿ ಸಿವಿಲ್ ಆಸ್ಪತ್ರೆ ವೈದ್ಯರು ಇದೊಂದು ನಮಗೆ ದೊಡ್ಡ ಸಮಸ್ಯೆಯಾಗಿತ್ತು. ಕೇವಲ ೨೦ ದಿನದಲ್ಲಿ ಮೂರು ಸಲ ರಕ್ತ ಮರುಪೂರಣ ಮಾಡಲಾಗಿತ್ತು, ಆತನ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಚಿಕಿತ್ಸೆ ನೀಡಲಾಗಿತ್ತು ಎಂದಿದ್ದಾರೆ. ಹೀಗಾಗಿ ಕೊರೊನಾ ವಿರುದ್ಧ ಹೋರಾಟ ನಡೆಸಿ ಆತ ಗುಣಮುಖನಾಗಿದ್ದಾನೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಶೀಘ್ರದಲ್ಲೇ ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಅನುಮತಿ

Tue May 5 , 2020
ರಾಜ್ಯದಲ್ಲಿ ಶೀಘ್ರದಲ್ಲೇ ಮುಜರಾಯಿ ಇಲಾಖೆ ಎಲ್ಲ ದೇವಾಲಯಗಳನ್ನು ತೆರೆಯಲಾಗುವುದು ಎಂದು ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಾದ್ಯಂತ ಮೂರನೇ ಹಂತದ ಲಾಕ್‌ಡೌನ್ ವಿಸ್ತರಣೆಯಾಗಿದ್ದರೂ ರಾಜ್ಯದಲ್ಲಿ ಕೆಲವು ವಲಯಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಹಸಿರು ವಲಯದಲ್ಲಿರುವ ಜಿಲ್ಲೆಗಳಲ್ಲಿ ಮುಕ್ತ ಓಡಾಟ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅನುವು ಮಾಡಿಕೊಡಲಾಗಿದೆ. ಅಲ್ಲದೆ, ಮದ್ಯ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿ ಮುಜರಾಯಿ ಇಲಾಖೆ ದೇವಸ್ಥಾನಗಳನ್ನು ಸದ್ಯದಲ್ಲೇ ತೆರೆಯಲಾಗುವುದು. ಆದರೆ, […]

Advertisement

Wordpress Social Share Plugin powered by Ultimatelysocial