ಕೊರೊನಾದಿಂದ ಮೃತಪಟ್ಟ ಟೊಯೊಟ ಕಾರ್ಮಿಕ

ರಾಮನಗರ ಜಿಲ್ಲೆ ಬಿಡದಿಯ ಟೊಯೊಟಾ ಕಾರು ಕಂಪನಿಯ ನೌಕರ ಕಳೆದ ಎರಡು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾನೆ. ಆತನ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಏಷ್ಯಾದ ದೊಡ್ಡ ಕಾರು ತಯಾರಿಕಾ ಕಂಪನಿಯಾದ ಟೊಯೊಟಾ ಕಾರ್ಖಾನೆಯಲ್ಲಿ ಕೊರೊನಾ ವೈರಸ್ ಭೀತಿ ಉಂಟಾಗಿದೆ. ಕೊರೊನಾ ವೈರಸ್ ಸೋಂಕಿಗೆ ಬಲಿಯಾದ ಟೊಯೊಟಾ ಕಾರ್ಮಿಕ ಬೆಂಗಳೂರಿನ ವಿಜಯನಗರದ ನಿವಾಸಿಯಾಗಿದ್ದು, ಮೃತನ ತಂದೆ ಕೂಡ ಕಳೆದ ಜುಲೈ 2 ರಂದು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಂದೇ ವಾರದಲ್ಲಿ ಟೊಯೊಟಾ ಕಾರ್ಮಿಕ ಮತ್ತು ಅವರ ತಂದೆ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, ಟೊಯೊಟಾ ಕಂಪನಿ ಉದ್ಯೋಗಿಗಳಿಗೆ ಈಗ ಆತಂಕ ಶುರುವಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಓ ಆತ್ಮಹತ್ಯೆ

Tue Jul 7 , 2020
ಗ್ರಾಹಕರ ಸಾವಿರಾರು ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡಿದ್ದ ಆರೋಪದ ಮೇಲೆ ಎಸಿಬಿ ದಾಳಿಗೊಳಗಾಗಿದ್ದ ಬಸವನಗುಡಿಯ ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಾಸುದೇವಮಯ್ಯ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ರಹ್ಮಣ್ಯಪುರದ ಪೂರ್ಣಪ್ರಜ್ಞಾ ಲೇಔಟ್‌ನ ರಸ್ತೆಯಲ್ಲಿ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ಯಕ್ಕೆ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟತೆ ಇಲ್ಲ. ವಿಧಿ ವಿಜ್ಞಾನ […]

Advertisement

Wordpress Social Share Plugin powered by Ultimatelysocial