ಕೊರೊನಾ ವಾರಿಯರ್ಸ್ ಗೆ ಇನ್ಮುಂದೆ ಮತ್ತಷ್ಟು ಹೆಚ್ಚಿನ ಭದ್ರತೆ

ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ, ದಾಳಿಯನ್ನು ನಡೆಸಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವಾರಿಯರ್ಸ್ ಗೆ ಇನ್ಮುಂದೆ ಮತ್ತಷ್ಟು ಹೆಚ್ಚಿನ ಭದ್ರತೆ ಒದಗಿಸಲಾಗುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.  ದಾಳಿಗೆ ಮುಂದಾದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಗ್ರೀನ್ ಜೋನ್ ವಾತಾವರಣವಿದೆ. ಪಾದರಾಯನಪುರ ಗಲಾಟೆ ಪ್ರಕರಣದ ಬಗ್ಗೆ ಮಾತನಾಡಿದ  ಅವರು, ತನಿಖೆ ಚುರುಕಿನಿಂದ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಂಧನ ಬಾಕಿ ಇದೆ. ಆರೋಪಿ ಬಂಧಿಸಿದ ಬಳಿಕ ನೈಜತೆ ಸಿಗಲಿದ್ದು, ಗಲಾಟೆ ಹಿಂದಿನ ಅಸಲಿ ಕಾರಣ ಗೊತ್ತಾಗಲಿದೆ ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಲಾಕ್‌ಡೌನ್ ೧೦ ವಾರಗಳ ಕಾಲ ಮುಂದುವರಿಕೆ..?

Thu Apr 23 , 2020
ನವದೆಹಲಿ : ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ. 3 ರ ನಂತರ ಭಾರತದಲ್ಲಿ ಇನ್ನೂ 10 ವಾರಗಳ ಲಾಕ್ ಡೌನ್ ಅವಶ್ಯಕತೆ ಇದೆ ಎಂದು ವಿಶ್ವದ ಅತಿದೊಡ್ಡ ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ನ ಸಂಪಾದಕ ರಿಚರ್ಡ್ ಹಾರ್ಟನ್ ಸಲಹೆ ನೀಡಿದ್ದಾರೆ.ಒಂದು ವೇಳೆ ಲಾಕ್ ಡೌನ್ ಸಡಿಲಗೊಳಿಸಿದರೆ ಕೊರೊನಾ ಸೋಂಕಿನ ಎರಡನೇ ಅಲೆ ಭಾರತಕ್ಕೆ ಅಪ್ಪಳಿಸಲಿದೆ.ಈಗಿರುವ ಸ್ಥಿತಿಗಿಂತ ಗಂಭೀರ ಸ್ಥಿತಿಗೆ ಭಾರತ ತಲುಪಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಚೀನಾದಲ್ಲಿ […]

Advertisement

Wordpress Social Share Plugin powered by Ultimatelysocial