ಕೊರೊನಾ ವೈರಸ್ ಮಹಾಮಾರಿಗೆ ಕಲಬುರಗಿ ಮಂದಿ ಬೆಚ್ಚಿ ಬೀಳುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದೇ ದಿನ ರಾಜ್ಯದಲ್ಲಿ 9 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ . ಈ ಕುರಿತು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್ ನಿಂದ ತಿಳಿದು ಬಂದಿದೆ. ಹೊಸದಾಗಿ ಸೋಂಕಿತರ ಪೈಕಿ ಕಲಬುರಗಿಯಲ್ಲಿ 8, ಮತ್ತು ಬೆಳಗಾವಿಯಲ್ಲಿ 1 ದೃಢವಾಗಿದೆ. ಇಂದಿನ ಸೋಂಕಿತರಲ್ಲಿ ಹೆಚ್ಚಿನವರು ಮಕ್ಕಳೇ ಇರುವುದು ಆತಂಕಕ್ಕೆ ಕಾರಣವಾಗಿದೆ.