ಕೊರೊನಾ ಹ್ಯಾಟ್ರಿಕ್ ಪರೀಕ್ಷೆಯಲ್ಲಿ ಸಿಎಂಗೆ ನೆಗೆಟಿವ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಕೋವಿಡ್ ಟೆಸ್ಟ್‌ಗೆ ಒಳಗಾಗಿದ್ದು, ಈ ಬಾರಿಯೂ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿದೆ.ಸಿಎಂ ನಿವಾಸ ಮತ್ತು ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಕೋವಿಡ್ ಟೆಸ್ಟ್ ಮಾಡಿಸಿದ್ದರು. ವರದಿಯಲ್ಲಿ ನೆಗೆಟಿವ್ ಬಂದಿದೆ. ಇದುವರೆಗೆ ಸುಮಾರು ನಾಲ್ಕು ಬಾರಿ ಸಿಎಂ ಯಡಿಯೂರಪ್ಪ ಕೋವಿಡ್ ಪರೀಕ್ಷೆ ಮಾಡಿಸಿದ್ದಾರೆ. ಈ ಎಲ್ಲಾ ಟೆಸ್ಟ್‌ಗಳಲ್ಲಿ ಸಿಎಂಗೆ ಕೊರೊನಾ ನೆಗೆಟಿವ್ ಬಂದಿದೆ. ಇದರಿಂದ ಸಿಎಂ ಮತ್ತು ಅಧಿಕಾರಿಗಳು ಪೂರ್ತಿ ನಿರಾಳರಾಗಿದ್ದಾರೆ.ಸಿಎಂ ಅವರ ಗೃಹ ಕಚೇರಿ ಕೃಷ್ಣಾ, ಸರ್ಕಾರಿ ನಿವಾಸ ಕಾವೇರಿ ಮತ್ತು ಅಧಿಕೃತ ನಿವಾಸ ಧವಳಗಿರಿಯಲ್ಲಿರುವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೆಲ ದಿನಗಳ ಕಾಲ ಮನೆಯಲ್ಲಿ ಉಳಿದಿದ್ದರು.

 

Please follow and like us:

Leave a Reply

Your email address will not be published. Required fields are marked *

Next Post

ಜಮ್ಮು ಕಾಶ್ಮೀರದಲ್ಲಿ ಸೇನಾ ಪಡೆಯ ಭರ್ಜರಿ ಕಾರ್ಯಚರಣೆ

Sat Jul 18 , 2020
ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿಯಾಗಿ ಉಗ್ರರ ಭೇಟೆಯನ್ನ ಮುಂದುವರಿಸಿದ್ದು ಉಗ್ರರ ನುಸುಳುವಿಕೆಯನ್ನ ಪದೇ ಪದೇ ವಿಫಲಗೊಳಿಸುತ್ತಿದೆ.. ಆದರು ಸಹ ಉಗ್ರರ ಒಳನುಸುಳುವಿಕೆಯ ಯತ್ನ ಮಾತ್ರ ಮುಂದುವರೆಯುತ್ತಲೇ ಇದೆ. ಜಮ್ಮು-ಕಾಶ್ಮೀರದಲ್ಲಿ ನಡೆಸಲಾಗಿರುವ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಅಮ್ಶಿಪೊರಾ ಹಳ್ಳಿಯಲ್ಲಿ ಉಗ್ರರು ಅಡಗಿಕುಳಿತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಶೋಧ […]

Advertisement

Wordpress Social Share Plugin powered by Ultimatelysocial