ರಾಜ್ಯದಲ್ಲಿ ಇಂದು ಮತ್ತೆ 11 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ . ಈ ಕುರಿತು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್ ನಿಂದ ತಿಳಿದು ಬಂದಿದೆ. ಇಂದು 8 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 520 ಕ್ಕೆ ಏರಿಕೆಯಾಗಿದೆ. ಹೊಸದಾಗಿ ಸೋಂಕಿತರ ಪೈಕಿ ಬಾಗಲಕೋಟೆಯಲ್ಲಿ ಮೂವರಿಗೆ, ಕಲಬುರ್ಗಿಯಲ್ಲಿ ಆರು ಜನರಿಗೆ, ಬೆಂಗಳೂರು ನಗರ ಮತ್ತು ಗದಗ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೋನಾ ಕೇಸ್ ಪತ್ತೆಯಾಗಿದೆ. ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ರಾಜ್ಯದಲ್ಲಿ 20 ಮಂದಿ ಬಲಿಯಾಗಿದ್ದಾರೆ.
Please follow and like us:
Tue Apr 28 , 2020
ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಾಗ ಬಳಕೆ ಮಾಡುವ ಪಿಪಿಇ ಕಿಟ್ಗಳನ್ನು ತಯಾರಿಸಲು ನೈರುತ್ಯ ರೈಲ್ವೆ ಇಲಾಖೆ ಮುಂದಾಗಿದೆ. ಪಿಪಿಇ ಕಿಟ್ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಡಿಆರ್ಡಿಓ ಸೂಚನೆ ಮೆರೆಗೆ ನೈರುತ್ಯ ರೈಲ್ವೆಯ ಹುಬ್ಬಳ್ಳಿ ಮತ್ತು ಮೈಸೂರು ವರ್ಕ್ಶಾಪ್ಗಳಲ್ಲಿ ಕೊರೊನಾ ವಾರಿಯರ್ಸ್ಗೆ ರಕ್ಷಣೆ ನೀಡುವ ವೈಯಕ್ತಿಕ ಕಿಟ್ ತಯಾರಿಸಲಾಗುತ್ತಿದ್ದು, ಇದುವರೆಗೂ ಹುಬ್ಬಳ್ಳಿ ೪೫೦, ಮೈಸೂರಲ್ಲಿ ೨೦೦ ಕಿಟ್ಗಳನ್ನು ಸಿದ್ಧಪಡಿಸಲಾಗಿದೆ. ಒಟ್ಟು ೨೦ ಸಿಬ್ಬಂದಿಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. […]