ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ; ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಈಗಾಗಲೇ ಪ್ರಚಾರ ಕಾರ್ಯವನ್ನು ಸಹ ಆರಂಭಿಸಿದ್ದಾರೆ. ಇದರ ಮಧ್ಯೆ ಸಂಸ್ಥೆಯೊಂದು ನಡೆಸಿರುವ ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ.

ಪೋಲ್ ಹೌಸ್ ಎಂಬ ಸಂಸ್ಥೆ ಈ ಸಮೀಕ್ಷೆಯನ್ನು ನಡೆಸಿದ್ದು, ಸಿದ್ದರಾಮಯ್ಯನವರ ಸ್ಪರ್ಧೆಗೆ ಕೋಲಾರ ಸುರಕ್ಷಿತ ಕ್ಷೇತ್ರ ಎಂಬುದು ಇದರಲ್ಲಿ ಬಹಿರಂಗವಾಗಿದೆ. ಸಂಸ್ಥೆಯ 60 ಮಂದಿಯ ತಂಡ ಕೋಲಾರ ವಿಧಾನಸಭಾ ಕ್ಷೇತ್ರದಾದ್ಯಂತ ಈ ಸಮೀಕ್ಷೆಯನ್ನು ನಡೆಸಿತ್ತು ಎಂದು ಹೇಳಲಾಗಿದೆ.

ಸಮೀಕ್ಷೆಯಲ್ಲಿ ಅಂದಾಜು 20,000 ಜನರ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಬಹುತೇಕ ಮಂದಿ ಸಿದ್ದರಾಮಯ್ಯನವರ ಸ್ಪರ್ಧೆಗೆ ಒಲವು ತೋರಿದ್ದಾರೆ ಎಂಬ ಸಂಗತಿ ತಿಳಿದು ಬಂದಿದೆ. ತಮ್ಮ ಕ್ಷೇತ್ರದಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದರೆ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯವೂ ಹಲವರಿಂದ ವ್ಯಕ್ತವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವೃಶ್ಚಿಕ ರಾಶಿ ಭವಿಷ್ಯ.

Mon Feb 27 , 2023
ಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ. ಒತ್ತಡದ ಅವಧಿಯಿದ್ದರೂ ಕುಟುಂಬದ ಬೆಂಬಲ ನಿಮಗೆ ಸಹಾಯ ಮಾಡುತ್ತದೆ. ಇಂದು ಪ್ರೀತಿಯ ಅನುಪಸ್ಥಿತಿಯ ಭಾವನೆ ಬರಬಹುದು. […]

Advertisement

Wordpress Social Share Plugin powered by Ultimatelysocial