ಕೋವಿಡ್-೧೯ ಹೆಸರಿನಲ್ಲಿ ಮೂರು ಸಾವಿರ ಕೋಟಿ ಹಗರಣ

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಉಪಾಧ್ಯಕ್ಷ ಮಜೀದ್ ಖಾನ್ ಅವರು, ರಾಜ್ಯ ಸರ್ಕಾರವು ಕೋವಿಡ್-೧೯ ನಿರ್ವಹಣೆಗಾಗಿ ಇಲ್ಲಿಯವರೆಗೆ ಮೂರು ಸಾವಿರದ ಮುನ್ನೂರ ತೊಂಬತ್ತೆರಡು (೩೩೯೨) ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಯಾವ ಯಾವ ವಿಷಯಕ್ಕೆ ಎಷ್ಟು ಖರ್ಚು ಮಾಡಲಾಗಿದೆ ಮಾಹಿತಿ ಹಕ್ಕು (ಖಖಿI) ಮೂಲಕ ಕೇಳಿದಾಗ ಆಡಿಟ್ ಆಗಬೇಗು ಎಂಬ ಮಾಹಿತಿಯನ್ನು ರವಾನಿಸುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ ೫೦೦ ಮಿ.ಲಿ ಸ್ಯಾನಿಟೈಸರ್ ಒಂದಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಅಂಗಸAಸ್ಥೆ ‘ಕರ್ನಾಟಕ ಲಾಜಿಸ್ಟಿಕ್ ಲಿಮಿಟೆಡ್’ ಸಂಸ್ಥೆಯು ರುಪಾಯಿ ೭೮ ರಂತೆ ಪೂರೈಕೆ ಮಾಡಬಹುದು ಎಂದು ಟೆಂಡರ್ ಕರೆದಾಗ ಹೇಳಿಕೊಂಡಿದೆ. ಆದರೆ ಅವರನ್ನು ಹೊರತುಪಡಿಸಿ ಒಂದು ಚಿಕ್ಕ ಬಾಟಲ್ ಸ್ಯಾನಿಟೈಸರಿಗೆ ೬೦೦ ರೂ.ಯಂತೆ ಖರೀದಿ ಮಾಡಿದ್ದಾರೆ. ಅದೇ ರೀತಿ ಒಂದು ಥರ್ಮಲ್ ಸ್ಕ್ಯಾನರ್ ಬೆಲೆ ಗರಿಷ್ಠ ೩,೬೫೦ ಮಾತ್ರ. ಆದರೆ ಇವರು ಉಲ್ಲೇಖ ಮಾಡಿರುವಂತಹದ್ದು ೯,೦೦೦ ರೂಪಾಯಿ ಎಂದು ಅವರು ವಿವರಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಕಾರಾಗೃಹಕ್ಕೆ ತಟ್ಟಿದ ಸೋಂಕು

Sun Jul 5 , 2020
ಮೈಸೂರಿನ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಯೊಬ್ಬರಿಗೆ ಕೋವಿಡ್-೧೯ ಇರುವುದು ದೃಢಪಟ್ಟಿದೆ. ಈ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಜೊತೆಗಿದ್ದ ನಾಲ್ವರನ್ನು ಜೈಲಿನಲ್ಲೇ ಕ್ವಾರಂಟೈನ್ ಮಾಡಲಾಗಿದೆ.ಮೈಸೂರಿನಲ್ಲಿ ಈಚೆಗೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ, ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ. ನಂತರ ಪೊಲೀಸರಿಗೆ ಶರಣಾಗಿದ್ದ. ಬೆಂಗಳೂರಿನಲ್ಲಿದ್ದ ಕಾರಣ ಆತನನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜೂನ್ ೩೦ರಂದು ಗಂಟಲು ದ್ರವ ಪಡೆದು, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಹೀಗಾಗಿ, ವಿಜಯನಗರ ಠಾಣೆಯ ಪೊಲೀಸರು ಕೂಡ ಈಗ ಆತಂಕದಲ್ಲಿದ್ದಾರೆ. […]

Advertisement

Wordpress Social Share Plugin powered by Ultimatelysocial