ಕೋವಿಡ್-19: ರಾಜ್ಯದಲ್ಲಿ ನಿನ್ನೆ ದಾಖಲೆಯ 67,000 ಮಂದಿ ಗುಣಮುಖ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರ್ಭಟದ ನಡುವಲ್ಲೇ ಗುರುವಾರ ಒಂದೇ ದಿನ 67,236 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ.

ಮೂರನೇ ಅಲೆಯಲ್ಲಿ ಮೊದಲ ಬಾರಿಗೆ ಜನವರಿ 18 ರಂದು 40ಸಾವಿರಕ್ಕಿಂತ ಹೆಚ್ಚು ಪ್ರಕರಣ ವರದಿಯಾಗಿತ್ತು.

ಅಲ್ಲಿಂದ ನಿರಂತರವಾಗಿ 40 ಸಾವಿರ ಮೀರಿ ಹೊಸ ಪ್ರಕರಣಗಳು ವರದಿಯಾಗಿದ್ದವು. ಗುರುವಾರ ಹೊಸ ಪ್ರಕರಣಗಳ ಸಂಖ್ಯೆ 38,754ಕ್ಕೆ ಇಳಿದಿದೆ,

ಕೋವಿಡ್ ಪರೀಕ್ಷೆಯ ಪ್ರಮಾಣ ಕೂಡ 1.86 ಲಕ್ಷದಷ್ಟಿತ್ತು. ಪಾಸಿಟಿವಿಟಿ ದರ ಕೂಡ ಶೇ.20.44ಕ್ಕೆ ಇಳಿದಿದೆ. ಇದೇ ವೇಳೆ ಒಂದೇ ದಿನ 67,236 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡು ಹೊಸ ದಾಖಲೆ ನಿರ್ಮಾಣವಾಗಿದೆ.

ಎರಡನೇ ಅಲೆಯ ವೇಳೆ ಮೇ.24ಕ್ಕೆ 57,333 ಮಂದಿ ಒಂದೇ ದಿನ ಗುಣಮುಖ ಹೊಂದಿ ದಾಖಲೆ ಸೃಷ್ಟಿಯಾಗಿತ್ತು. ರಾಜ್ಯದಲ್ಲೂ ಕಳೆದ ನಾಲ್ಕು ದಿನಗಳಿಂದ ಪ್ರತಿ ದಿನ 40 ಸಾವಿರಕ್ಕಿಂತ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಇದರಂತೆ ಮರಣ ಪ್ರಮಾಣ ಕೂಡ ಶೇ.1.04ಕ್ಕೆ ಇಳಿಕೆಯಾಗಿದೆ.

ರಾಜ್ಯದಲ್ಲಿ ನಿನ್ನೆ ಗುಣಮುಖರಾದ 67 ಸಾವಿರ ಮಂದಿಯ ಪೈಕಿ ಬೆಂಗಳೂರು ಒಂದರಲ್ಲಿಯೇ 43,997 ಗುಣಮುಖರಾಗಿದ್ದಾರೆ. ಅಲ್ಲದೆ, ನಗರದಲ್ಲಿ ಮರಣ ಪ್ರಮಾಣ ಶೇ.1ಕ್ಕಿಂತ ಕಡಿಮೆ ಕಂಡು ಬಂದಿದೆ, ನಗರದಲ್ಲಿ ಮರಣ ಪ್ರಮಾಣ ಶೇ.0.99ಕ್ಕೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಈ ಹಿಂದೆ 3,57,909 ರಷ್ಟಿದ್ದ ಸಕ್ರಿಯ ಪ್ರಕರಣಗಳು ಪ್ರಸ್ತುತ 3,28,711ಕ್ಕೆ ಇಳಿಕೆಯಾಗಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳು ಶೇ.8.15ರಷ್ಟು ಕುಸಿತವಾಗಿರುವುದು ಕಂಡು ಬಂದಿದೆ. ಇನ್ನು ನಗರದಲ್ಲಿ 2,16,145ರಷ್ಟಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ 1,89,853ಕ್ಕೆ ತಲುಪಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.12.16ಕ್ಕೆ ಕುಸಿದಿರುವುದು ಕಂಡು ಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ರಾಜಧಾನಿ ಬೆಂಗಳೂರಿನಲ್ಲಿಯೂ ಆರಂಭವಾಯ್ತು ನಕಲಿ ತುಪ್ಪದ ಹಾವಳಿ; KMF ಅಧಿಕಾರಿಗಳಿಂದ ದಾಳಿ |speed news kannada |

Fri Jan 28 , 2022
ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನ ಬಳಿಕ ರಾಜಧಾನಿ ಬೆಂಗಳೂರಿನಲ್ಲಿಯೂ ನಂದಿನಿ ನಕಲಿ ತುಪ್ಪದ ಜಾಲ ಪತ್ತೆಯಾಗಿದ್ದು, ಕೆಎಂಎಫ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮೈಸೂರಿನಲ್ಲಿ ಉತ್ಪಾದಿಸಲ್ಪಟ್ಟ ನಕಲಿ ತುಪ್ಪ ಬೆಂಗಳೂರು ಹಾಗೂ ಸುತ್ತಮುತ್ತ ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಹಲವು ಅಧಿಕಾರಿಗಳ ವಿಶೇಷ ತಂಡ ರಚನೆ ಮಾಡಿ ಕೆಎಂಎಫ್ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿದ್ದಾರೆ.ಹನುಮಂತನಗರ, ಜಯನಗರ, ರಾಜಾಜಿನಗರ, ನೆಲಮಂಗಲ, ಮಾಕಳಿ, ಹೊಸಕೋಟೆಯ ದೇವನಗೊಂದಿ ಹಾಗೂ ಇತರ ಭಾಗಗಳಲ್ಲಿ ಅಧಿಕಾರಿಗಳು […]

Advertisement

Wordpress Social Share Plugin powered by Ultimatelysocial