ಗಮನಿಸಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ

ಬೆಂಗಳೂರು: ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ತಳ್ಳಿ ಹಾಕಿದ್ದು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಈ ಕುರಿತಂತೆ ಮಾಹಿತಿ ನೀಡಲಾಗಿದೆ.

‘ಹಿಜಾಬ್‌ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲʼ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟಿಎಂಸಿ ಬಲ ಹೆಚ್ಚಿಸಿದ ಮುಕುಲ್ ಸಂಗ್ಮಾ,

Thu Mar 2 , 2023
ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಟಿಎಂಸಿ ಮುನ್ನಡೆ ಪಡೆಯುತ್ತಿದೆ. 60 ಸದಸ್ಯ ಬಲದ ವಿಧಾನಸಭೆಯ ಪೈಕಿ 59 ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆದಿದೆ.ಬುಡಕಟ್ಟು ಮತ್ತು ಕ್ರೈಸ್ತ ಸಮುದಾಯದ ಪ್ರಾಬಲ್ಯವಿರುವ ಚಿಕ್ಕ ರಾಜ್ಯವಾದ ಮೇಘಾಲಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಕಳೆದುಕೊಂಡಿದೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಟಿಎಂಸಿಗೆ ಪೈಪೋಟಿ ನೀಡುತ್ತಿದೆ.ಗುರುವಾರ ಮೇಘಾಲಯ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಟಿಎಂಸಿ 12, ಎನ್‌ಪಿಪಿ 19 ಸ್ಥಾನಗಳಲ್ಲಿ […]

Advertisement

Wordpress Social Share Plugin powered by Ultimatelysocial