ಗಾಳಿಯಿಂದಲೂ ಹರಡುತ್ತೆ ಕೊರೊನಾ

ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಭಾರಿಸುತ್ತಿದೆ. ಆದರೆ ಇದೀಗ ಗಾಳಿಯಿಂದಲೂ ವೈರಸ್ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ. ಇಷ್ಟು ದಿನ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಯ ಸೀನುವಿಕೆಯಿಂದ ಬರುವ ಡ್ರಾಪ್ ಲೆಟ್ಸ್, ಸ್ಪರ್ಶ ಮತ್ತು ಆತ ಮುಟ್ಟಿದ ವಸ್ತುಗಳಿಂದ ಹರಡುತ್ತದೆ ಎಂದೇ ತಿಳಿಯಲಾಗಿತ್ತು. ಆದರೆ ಇದೀಗ ಜಗತ್ತಿನ ಸುಮಾರು 239 ವಿಜ್ಞಾನಿಗಳು ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ. ಕೊರೋನಾ ವೈರಸ್ ಮೇಲೆ ನಿರಂತರವಾಗಿ ಸಂಶೋಧನೆ ನಡೆಸಿರುವ ವಿವಿಧ ದೇಶಗಳ ಸುಮಾರು 239 ವೈದ್ಯರು, ಸೋಂಕಿತ ವ್ಯಕ್ತಿಯೊಬ್ಬರು ಸೀನಿದ ನಂತರ ಗಾಳಿಯ ಮೂಲಕ ವೈರಸ್ ಕಣಗಳು ಬೇರೆಡೆಗೆ ಹರಡುತ್ತವೆ. ಗಾಳಿಯಲ್ಲಿರುವ ಕಣಗಳು ಉಸಿರಾಟದ ಮೂಲಕ ಮತ್ತೊಬ್ಬ ವ್ಯಕ್ತಿಯ ದೇಹವನ್ನು ಸೇರುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಇದರಿಂದ ಜನರು ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಕ್ಕೆ ಆಶಾಕಾರ್ಯಕರ್ತೆಯರ ಎಚ್ಚರಿಕೆ

Mon Jul 6 , 2020
ಜುಲೈ 10ರಿಂದ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದರು. ಜೂನ್ 30ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಆರೋಗ್ಯ ಸಚಿವ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. ನಂತರ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಅವರೂ ಹೇಳಿದ್ದಾರೆ. ಆದರೆ, ಈವರೆಗೆ ನಮಗೆ ಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ, ಯಾರಿಂದಲೂ ಯಾವುದೇ ಪ್ರತಿಕ್ರಿಯೆ […]

Advertisement

Wordpress Social Share Plugin powered by Ultimatelysocial