ಗುರುಗ್ರಾಮ – ದೆಹಲಿ ನಡುವಿನ ರಸ್ತೆ ಬಂದ್

ನವದೆಹಲಿ: ಗುರುಗ್ರಾಮ ಮತ್ತು ದೆಹಲಿ ನಡುವಿನ ರಸ್ತೆಯನ್ನು ಹರಿಯಾಣ ಸರ್ಕಾರ ನಿನ್ನೆ ರಾತ್ರಿ ಬಂದ್ ಮಾಡಿದ್ದರಿಂದ ಗಡಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್ ಉಂಟಾಗಿತ್ತು. ಇದರಿಂದ ಗೊಂದಲಕ್ಕೆ ಒಳಗಾದ ವಾಹನ ಸವಾರರು ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ಬಹುತೇಕ ವಲಸೆ ಹಾಗೂ ಕೂಲಿ ಕಾರ್ಮಿಕರು ಇದ್ದರು. ಸೈಕಲ್‌ಗಳು ಹಾಗೂ ದ್ವಿಚಕ್ರ ವಾಹನಗಳು, ಕಾರುಗಳು, ಲಘು ವಾಣಿಜ್ಯ ವಾಹನಗಳ ಮೂಲಕ ತಮ್ಮ ಸ್ವಂತ ಊರುಗಳಿಗೆ ತೆರಳಲು ಮುಂದಾಗಿದ್ದರು. ಈ ವೇಳೆ ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನು ಮಾತ್ರ ತಪಾಸಣೆ ನಡೆಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇತರೆ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ. ಹರಿಯಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹರಿಯಾಣ ಸರ್ಕಾರ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದೆ. ಇದರ ಮೊದಲ ಭಾಗವಾಗಿ ಗುರುಗ್ರಾಮ ಮತ್ತು ದೆಹಲಿ ನಡುವಿನ ರಸ್ತೆಯನ್ನು ಬಂದ್ ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ವಾರ್ಷಿಕ 15 ಸಾಂದರ್ಭಿಕ ರಜೆ ಮಂಜೂರು

Fri May 29 , 2020
ಬೆಂಗಳೂರು: ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆ ನೌಕರರಿಗೆ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರಿ ಕಚೇರಿಗಳಿಗೆ ಪ್ರತಿ ತಿಂಗಳು 2 ಹಾಗೂ 4ನೇ ಶನಿವಾರ ಸಾರ್ವತ್ರಿಕ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ವಾರ್ಷಿಕ 15 ಸಾಂದರ್ಭಿಕ ರಜೆಗಳನ್ನು 10ಕ್ಕೆ ಇಳಿಸಲಾಗಿತ್ತು. ಆದರೆ, ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆಯ ಸಿಬ್ಬಂದಿ ಈ ರಜೆಗಳಿಂದ ವಂಚಿತರಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಾಂದರ್ಭಿಕ ರಜೆ ಹೆಚ್ಚಿಸುವಂತೆ ಒತ್ತಾಯ ಕೇಳಿಬಂದಿತ್ತು. […]

Advertisement

Wordpress Social Share Plugin powered by Ultimatelysocial