ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಿದ ತಹಸೀಲ್ದಾರ್

SFI ಸಂಘಟನೆ, ದೇವದುರ್ಗ ಹಾಗೂ ಸಿಂಧನೂರು ತಹಸೀಲ್ದಾರ್ ರವರ ಮೂಲಕ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ  ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು. ಕೊರೋನ ವೈರಸ್ ಹರಡುವಿಕೆ ಮತ್ತು ಲಾಕ್ಡೌನ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾರ್ಥಿಗಳ ಪಾಲಕರು  ಆದಾಯವಿಲ್ಲದೆ ಹೊಟ್ಟೆ ತುಂಬಿಸಿಕೊಳ್ಳಲು ಪರದಾಡುತ್ತಿದ್ದಾರೆ.ಬಹುತೇಕ ವಿದ್ಯಾರ್ಥಿ ಗಳು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವ ಕಾರಣ ಆನ್ ಲೈನ್ ಮೂಲಕ ಪರೀಕ್ಷಾ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯ ದಿಢೀರನೆ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದು ಮತ್ತು ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಕಟ್ಟಬೇಕೆಂದು ವಿದ್ಯಾರ್ಥಿಗಳಿಗೆ ಆದೇಶದ ತಿಳಿಸಿರುವುದು ಖಂಡನೀಯ ಎಂದು ವಿದ್ಯಾರ್ಥಿಗಳು ವಿರೋಧಿ ವ್ಯಕ್ತಪಡಿಸಿದ್ದಾರೆ.  ಆದಾಯವಿಲ್ಲದೆ ಅತಂತ್ರ ಪರಿಸ್ಥಿತಿಯಲ್ಲಿರುವ ವಿದ್ಯಾರ್ಥಿಗಳ ಪಾಲಕರು ಮತ್ತು ಪೋಷಕರ ಬಳಿ ಹಾಗೂ ವಿದ್ಯಾರ್ಥಿಗಳಿಂದ ಯಾವುದೇ ರೀತಿಯಾದಂತಹ ಪರೀಕ್ಷಾ ಶುಲ್ಕವನ್ನು ಪಡೆಯದೆ ಉಚಿತವಾಗಿ ಈ ಬಾರಿ ವಿವಿಧ ಹಂತದ ಪದವಿ ಮತ್ತು ಸ್ನಾತಕೋತ್ತರ ಪದವಿ ಓದುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ರಹಿತವಾಗಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಬೇಕು. ತಾವುಗಳು ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಕಟ್ಟಬೇಕೆಂದು ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆದು ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಿಕೊಡಬೇಕು. ಪರೀಕ್ಷಾ ಶುಲ್ಕವನ್ನು ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಯೆ ಭರಿಸಬೇಕು, ಒಂದು ವೇಳೆ ತಾವು ಹೊರಡಿಸಿದ ಆದೇಶದ ಕಡ್ಡಾಯ ಪಾಲನೆಗೆ ಮುಂದಾದಲ್ಲಿ ವಿದ್ಯಾರ್ಥಿಗಳೊಂದಿಗೆ ಸೇರಿ SFI ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಮನವಿಯ ಮೂಲಕ ಗುಲ್ಬರ್ಗಾ ವಿಶ್ವವಿದ್ಯಾಲಯ ಕುಲಪತಿಗೆ ಎಚ್ಚರಿಕೆ ನೀಡಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಶಾಸಕ ಮುನಿರಾಜು ಎಡವಟ್ಟು

Tue May 26 , 2020
ಬೆಂಗಳೂರು: ಕೊರೊನಾ ವೈರಸ್ ನಿಂದ ಜನರು ತುಂಬಾ ಆತಂಕ ಪಡುವಂತಾಗಿದೆ. ಮದುವೆಗೆ ೫೦ ಜನ ಅಂತ್ಯ ಕ್ರೀಯೆಗೆ ೨೫ ಜನ ಸೇರಬೇಕು ಎಂದು ಆದೇಶ ಹೊರಡಿಸಿದೆ. ಇದರ ಮಧ್ಯೆ ಜನನಾಯಕ ಮಾಜಿ ಶಾಸಕ ಮುನಿರಾಜು ಸಾಮಾಜಿಕ ಅಂತರವನ್ನು ಮರೆತು. ದಾಸರಹಳ್ಳಿ ಯ ಮೆಟ್ರೋ ನಿಲ್ದಾಣದಲ್ಲಿ ಕೊರೊನಾ ವಾರಿಯರ್ಸ್ಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಡಾಕ್ಟರ್ ಗಳು, ಪೋಲಿಸರು, ಟ್ರಾಫಿಕ್ ಪೋಲಿಸರು, ಆಶಾ ಕಾರ್ಯಕರ್ತರರು ಹಾಗೂ ಇನ್ನುಳಿದ ಕೊರೊನಾ ವಾರಿಯರ್ಸ್ಗಳು […]

Advertisement

Wordpress Social Share Plugin powered by Ultimatelysocial