ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿಯಿಂದಲೇ ಸಿಇಟಿ, ನೀಟ್ ಪರೀಕ್ಷೆಗೆ ತರಬೇತಿ

ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.ಈ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ತರಬೇತಿ ನೀಡಲಾಗುತ್ತಿದ್ದು, ಬಳಿಕ ಯೋಜನೆ ಕೈಬಿಡಲಾಗಿತ್ತು. NCERT ಪಠ್ಯಕ್ರಮದ ಅನ್ವಯ ಮತ್ತು ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಪ್ರತಿ ತಾಲೂಕಿನಲ್ಲಿ ಒಂದು ನೋಡಲ್ ಕಾಲೇಜು ಗುರುತಿಸಿ ತರಬೇತಿ ನೀಡಲಾಗುವುದು ಎನ್ನಲಾಗಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ಯೋಜನೆಯಡಿ ಇಂಗ್ಲಿಷ್ ತರಬೇತಿ ನೀಡುತ್ತಿದ್ದು, ಇದನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಲು ಪರವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್‌ ನಟಿ ಕಾಜೋಲ್‌ಗೆ ಕೋವಿಡ್-19 ಪಾಸಿಟಿವ್

Sun Jan 30 , 2022
ಕರೋನವೈರಸ್ ಮೂರನೇ ಅಲೆಯು ದೇಶದ ಜನತೆಯನ್ನು ತೀವ್ರವಾಗಿ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಜನಪ್ರಿಯ ಸೆಲೆಬ್ರಿಟಿಗಳು ಕೋವಿಡ್‌ಗೆ ಈಡಾಗಿದ್ದು, ಕೆಲವು ಮಂದಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರೇ ಇನ್ನೂ ಕೆಲವರು, ಅದರಿಂದ ಚೇತರಿಸಿಕೊಂಡಿದ್ದಾರೆ.ಈ ನಡುವೆ ನಟಿ ಕಾಜೋಲ್ ಮಾರಣಾಂತಿಕ ವೈರಸ್‌ ಇರೋದು ಧೃಡಪಟ್ಟಿದೆ. ನಟಿ ತಮ್ಮ Instagram ಖಾತೆಯಲ್ಲಿಗೆ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial