‘ಗ್ರಾಮ ಒನ್’ ಯೋಜನೆ ವಾರ್ಷಿಕೋತ್ಸವ

ಬೆಂಗಳೂರು: ‘ಗ್ರಾಮ ಒನ್’ ನನ್ನ ಕನಸಿನ ಕ್ರಾಂತಿಕಾರಿ ಯೋಜನೆಯಾಗಿದ್ದು, ಇವುಗಳಿಗೆ ಮತ್ತಷ್ಟು ಆರ್ಥಿಕ, ತಾಂತ್ರಿಕ ಶಕ್ತಿ ತುಂಬಲಾಗುವುದು. ಇದರಿಂದ ನೂರಾರು ಸೇವೆಗಳು ಮನೆ ಬಾಗಿಲಲ್ಲಿ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಸರ್ಕಾರದ ಮಹತ್ವಕಾಂಕ್ಷಿಯ ‘ಗ್ರಾಮ ಒನ್’ ಯೋಜನೆ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಒನ್ ಯೋಜನೆ ರಾಜ್ಯದ ಜನರ ವಿಶ್ವಾಸ ಗಳಿಸಿದ್ದು, ಸರ್ಕಾರದ ನೂರಾರು ಸೇವೆ ಈ ಯೋಜನೆ ಮೂಲಕ ಮನೆ ಮನೆಗೆ ತಲುಪುತ್ತಿದೆ. ಗ್ರಾಮ ಒನ್ ಕೇಂದ್ರಗಳನ್ನು ಮತ್ತಷ್ಟು ಆರ್ಥಿಕವಾಗಿ, ತಾಂತ್ರಿಕವಾಗಿ ಬಲಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಗ್ರಾಮ ಒನ್ ಕ್ರಾಂತಿಕಾರಿ ಯೋಜನೆಯಾಗಿದೆ. ಸರ್ಕಾರದ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ತಂತ್ರಜ್ಞಾನ ಮತ್ತು ಸೇವಾ ಮನೋಭಾವದ ಮೂಲಕ ತಲುಪಿಸಲು ಸಾಧ್ಯ ಎನ್ನುವುದನ್ನು ತೋರಿಸಿಕೊಟ್ಟಿದೆ. ಯೋಜನೆಯನ್ನು ಇನ್ನಷ್ಟು ಉತ್ತಮಗೊಳಿಸಲಾಗುವುದು. ಮನೆ ಮನೆಗೆ ಸೇವೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜಾತಿ ಆದಾಯ ಪ್ರಮಾಣ ಪತ್ರದಿಂದ ಹಿಡಿದು ಸರ್ಕಾರದಿಂದ ದೊರೆಯಬೇಕಾದ ಅನೇಕ ಪ್ರಮಾಣಪತ್ರ, ಸೇವೆಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಆರಂಭಿಸಿ ಮನೆ ಮನೆಗೆ ಸೌಲಭ್ಯ ತಲುಪಿಸಲಾಗುತ್ತಿದೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಸ್ತೆ ಸಾರಿಗೆ ನಿಗಮ ಬಸ್‌ಗಳನ್ನು ಓಡಿಸುತ್ತಿದೆ.

Thu Feb 23 , 2023
  ಕಲಬುರಗಿ, ಫೆಬ್ರವರಿ 23; ಕಲ್ಯಾಣ ಕರ್ನಾಟಕ ಉತ್ಸವ-2023ರಲ್ಲಿ ಜನರು ಭಾವಹಿಸಲು ಅನುಕೂಲವಾಗುವಂತೆ ಕಲ್ಯಾಣ ಕರ್ನಾಟಕರಸ್ತೆ ಸಾರಿಗೆ ನಿಗಮ ಬಸ್‌ಗಳನ್ನು ಓಡಿಸುತ್ತಿದೆ. ಜನರು ಈ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಉತ್ಸವದಲ್ಲಿ ಪಾಲ್ಗೊಳ್ಳಲು ಕಲಬುರಗಿ ನಗರ, ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಪ್ರತಿ ಜಿಲ್ಲೆಯಿಂದ ಒಟ್ಟು 91 ಬಸ್‍ಗಳನ್ನು ಓಡಿಸಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರು ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಅಧ್ಯಕ್ಷರಾದ […]

Advertisement

Wordpress Social Share Plugin powered by Ultimatelysocial