ಚಂದ್ರಬಾಬು ನಾಯ್ಡು ಬಂಧನ ಖಂಡಿಸಿದ ಪವನ್ ಕಲ್ಯಾಣ್; ರಾಜಕೀಯ ಸೇಡು ಎಂದ ಟಾಲಿವುಡ್ ನಟ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ. ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ.
ರಾಜಕೀಯ ಸೇಡಿನಿಂದ ಚಂದ್ರಬಾಬು ನಾಯ್ಡು ಅವರನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಬಂಧಿಸಿದ್ದು, ಮಾಜಿ ಸಿಎಂ ಬೆಂಬಲಕ್ಕೆ ಜನಸೇನಾ ಪಕ್ಷ ನಿಲ್ಲಲಿದೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ ರೀತಿ ನೋವುಂಟು ಮಾಡಿದೆ. ರಾಜ್ಯದಲ್ಲಿ ಪ್ರತಿಪಕ್ಷ ನಾಯಕರನ್ನು ಬಂಧಿಸುವ ಪ್ರವೃತ್ತಿ ಮುಂದುವರೆದಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಯ್ಡು ಅವರನ್ನು ಬಂಧಿಸಿದ ರೀತಿ ಮತ್ತು ಚಿತ್ತೂರಿನಲ್ಲಿ ಇತ್ತೀಚಿನ ಘಟನೆಗಳು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಹಾಳುಮಾಡಲು ಪ್ರಯತ್ನಿಸುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಜನಸೇನಾ ಪಕ್ಷದ ನಾಯಕ ಆರೋಪಿಸಿದ್ದಾರೆ. ಸ್ಕಿಲ್​ ಡೆವಲಪ್​​ಮೆಂಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ, ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬಂಧಿಸಲಾಗಿದೆ.
Please follow and like us:

tmadmin

Leave a Reply

Your email address will not be published. Required fields are marked *

Next Post

Coffee Day: ಕಾಫಿ ಡೇ ವಿರುದ್ದ ದಿವಾಳಿ ಪ್ರಕ್ರಿಯೆ ಆರಂಭಿಸಲು ಅರ್ಜಿ ಸಲ್ಲಿಸಿದ ಐಡಿಬಿಐ ಟ್ರಸ್ಟಿಶಿಪ್!

Sat Sep 9 , 2023
ಮುಂಬೈ, ಮಹಾರಾಷ್ಟ್ರ: 228 ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡಿರುವ ಕಾಫಿ ಡೇ ಎಂಟರ್‌ಪ್ರೈಸಸ್ (Coffee Day Enterprises) ವಿರುದ್ಧ ಐಡಿಬಿಐ ಟ್ರಸ್ಟೀಶಿಪ್‌ (IDBI Trusteeship) ದಿವಾಳಿ ಪ್ರಕ್ರಿಯೆ ಆರಂಭಿಸುವ ಕುರಿತು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (NCLT) ಬೆಂಗಳೂರು ಶಾಖೆಯಲ್ಲಿ ಅರ್ಜಿ ಸಲ್ಲಿಸಿದೆ. ಈ ಮಾಹಿತಿಯನ್ನು ಶುಕ್ರವಾರ ಷೇರುಪೇಟೆಗೆ ತಿಳಿಸಲಾಗಿದೆ. ಕಾಫಿ ಡೇ ಎಂಟರ್‌ಪ್ರೈಸಸ್ ಕಾಫಿ ಡೇ ಗ್ರೂಪ್‌ನ (Coffee Day Group) ಮಾತೃ ಸಂಸ್ಥೆಯಾಗಿದೆ. ಕರ್ನಾಟಕದ ಮಾಜಿ ಸಿಎಂ […]

Advertisement

Wordpress Social Share Plugin powered by Ultimatelysocial