ಚಳ್ಳಕೆರೆ : ದುರ್ಗಾಂಬಿಕ ದೇವಸ್ಥಾನದ ಪೂಜಾರಿಕೆ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆ ನಡೆದು,ಕೊಲೆಯಲ್ಲಿ ಅಂತ್ಯವಾಗಿದೆ.

ಚಳ್ಳಕೆರೆ : ದುರ್ಗಾಂಬಿಕ ದೇವಸ್ಥಾನದ ಪೂಜಾರಿಕೆ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆ ನಡೆದು,ಕೊಲೆಯಲ್ಲಿ ಅಂತ್ಯವಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ, ತಾಲೂಕಿನ ರಂಗವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯರಾಮಪ್ಪ ( 55) ವರ್ಷ ಮೃತಪಟ್ಟ ವ್ಯಕ್ತಿ.ನಿನ್ನೆ ರಾತ್ರಿ ದೇವಸ್ಥಾನ ವಿಚಾರಕ್ಕೆಎರಡು ಗುಂಪುಗಳ ನಡುವೆ,ವಾಗ್ವಾದ ನಡೆದು ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ, ಚೆನ್ನಪ್ಪ, ಓಬಳೇಶ್,ಅರ್ಜುನ, ಆಕಾಶ್,ಮುಕುಂದ, ಎಂಬುವರು ಜಯರಾಮಪ್ಪ ಗೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಸ್ಥಳದಲ್ಲೇ ಕುಸಿದು ಬಿದ್ದ ಜಯರಾಮಪ್ಪ ನನ್ನು ಚಳ್ಳಕೆರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಸಾವಿಗೀಡಾಗಿದ್ದಾನೆ. ಈ ಬಗ್ಗೆ ಮೃತ ವ್ಯಕ್ತಿ ಪುತ್ರ ಹಾಗೂ ಪತ್ನಿ ಪೊಲೀಸ್ ಠಾಣೆಗೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಹಾಗೂ ಚಳ್ಳಕೆರೆ ಸಿಪಿಐ ರಾಮನಾಥ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೊಲೆಯಾದ ವ್ಯಕ್ತಿಯ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ಅಂತಿಮ‌ ದರ್ಶನ ಪಡೆದ ಸಿಎಂ ಬೊಮ್ಮಾಯಿ|Banglore|

Sun Jan 23 , 2022
ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮ‌ ನಮನ ಸಲ್ಲಿಸಿದರು. ಜ. ಮಂಜುನಾಥ ಅವರ ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಕ್ಕೆ ಭೇಟಿ ನೀಡಿದ್ದ ಸಿಎಂ ನ್ಯಾಯಮೂರ್ತಿಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ರಕ್ಷಣಾ ಆಯೋಗದ ಅಧ್ಯಕ್ಷರಾಗಿ […]

Advertisement

Wordpress Social Share Plugin powered by Ultimatelysocial