ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬದಂದು ಒಂದಿಷ್ಟು ಹೊಸ ಸಿನಿಮಾಗಳು ಅನೌನ್ಸ್ !

 

ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬದಂದು ಒಂದಿಷ್ಟು ಹೊಸ ಸಿನಿಮಾಗಳು ಅನೌನ್ಸ್ ಆಗುತ್ತವೆ. ಚಾಲೆಂಜಿಂಗ್ ಸ್ಟಾರ್ ಜೊತೆ ಸಿನಿಮಾ ಮಾಡುವುದಕ್ಕೆ ನಿರ್ಮಾಪಕರು ಕೂಡ ಕ್ಯೂನಲ್ಲಿ ನಿಂತಿದ್ದಾರೆ. ಈ ಹೊತ್ತಲ್ಲೇ ಸೂರಪ್ಪ ಬಾಬುಗೂ ದರ್ಶನ್ ಕಾಲ್‌ ಶೀಟ್ ಕೊಟ್ಟಿದ್ದಾರೆ ಅನ್ನೋ ಸುದ್ದಿನೂ ಇತ್ತು.

ಆ ಸುದ್ದಿ ಈಗ ನಿಜವಾಗಿದೆ.

ನಿರ್ಮಾಪಕ ಸೂರಪ್ಪ ಬಾಬು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ. ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಧಿಕೃತವಾಗಿ ‘ಪ್ರೊಡಕ್ಷನ್ ನಂ 1’ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅನೌನ್ಸ್ ಮಾಡಿದ್ದಾರೆ.

ಸೂರಪ್ಪ ಬಾಬು ಈ ಹಿಂದೆ ‘ಕೋಟಿಗೊಬ್ಬ 3’ ಸಿನಿಮಾ ನಿರ್ಮಾಣ ಮಾಡಿದ್ದರು. ಆದರೆ, ಈ ಸಿನಿಮಾ ರಿಲೀಸ್ ವೇಳೆ ವಿತರಕರು ಹಾಗೂ ಸೂರಪ್ಪ ಬಾಬು ನಡುವಿನ ವ್ಯವಹಾರ ಹಿಂದೆ ಮುಂದೆ ಆಗಿದ್ದರಿಂದ ಒಂದು ದಿನ ತಡವಾಗಿ ರಿಲೀಸ್ ಆಗಿತ್ತು. ಹೀಗಾಗಿ ನಷ್ಟ ಆನುಭವಿಸಿದ್ದರು. ಈಗ ಆ ಎಲ್ಲಾ ಸಂಕಷ್ಟದಿಂದ ಹೊರಬಂದು ದರ್ಶನ್ ಜೊತೆ ಸಿನಿಮಾ ಮಾಡುವುದಕ್ಕೆ ಮುಂದಾಗಿದ್ದಾರೆ.

ಈಗಾಗಲೇ ದರ್ಶನ್ ಹಾಗೂ ಸೂರಪ್ಪ ಬಾಬು ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದೆ. ಆ ಬಳಿಕಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ.

ದರ್ಶನ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್ ಆಗಿರೋದು ಅಭಿಮಾನಿಗಳಿಗಂತೂ ಖುಷಿ ಕೊಟ್ಟಿದೆ. ಸದ್ಯ ದರ್ಶನ್ ಬರ್ತ್‌ಡೇ ಸಂಭ್ರಮದಲ್ಲಿ ಮಿಂದೇಳುತ್ತಿರುವ ಅಭಿಮಾನಿಗಳಿಗೆ ಒಂದ್ಕಡೆ 56ನೇ ಸಿನಿಮಾ ಟೈಟಲ್ ಹಾಗೂ ಹೊಸ ಸಿನಿಮಾ ಅನೌನ್ಸ್ ಆದ್ದು ಉಡುಗೊರೆಯನ್ನೇ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಟ್ಟಣದ ಅಭಿವೃದ್ಧಿಗೆ 15 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ.

Thu Feb 16 , 2023
ಪುರಸಭಾ ವ್ಯಾಪ್ತಿಯ 23 ವಾರ್ಡ್ ಗಳಿಗೆ ಹಾಗೂ ಕ್ರೀಡಾಂಗಣ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಬಳಕೆ ಮಾಡಲು ಸರ್ವ ಸದಸ್ಯರಿಂದ ಅನುಮೋದನೆ ನೀಡಿದರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣ ಪುರಸಭಾ ಕಚೇರಿಯಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ಹಾಗೂ ಉಪಾಧ್ಯಕ್ಷೆ ಆಯಿಷಾ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು ಸಭೆಯಲ್ಲಿ ತಾಲ್ಲೂಕಿನ ಹಾಲಿ ಶಾಸಕ ರಮೇಶ್ ಕುಮಾರ್ ಹಾಜರಿದ್ದು ಪಟ್ಟಣದ ಅಭಿವೃದ್ಧಿಗೆ ಮೀಸಲಿರುವ 15 ಕೋಟಿ ಅನುದಾನವನ್ನು 23 ವಾರ್ಡುಗಳಲ್ಲಿ […]

Advertisement

Wordpress Social Share Plugin powered by Ultimatelysocial