ಚಿಕಿತ್ಸೆ ನೀಡದೆ ನಿರಾಕರಿಸಿದ ಆಸ್ಪತ್ರೆಗಳು

ಕೊರೊನಾ ವೈರಸ್ ರೋಗಲಕ್ಷಣಗಳಿದ್ದರೂ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ 18 ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ಶ್ರೀರಾಮುಲು ಶೋಕಾಸ್ ನೋಟಿಸ್ ನೀಡಿದ್ದಾರೆ. ಜೂನ್ 27 ರಂದು ಬೆಂಗಳೂರು ಮೂಲದ 51 ವರ್ಷದ ರೋಗಿಯೊಬ್ಬರಿಗೆ ಉಸಿರಾಟ ತೊಂದರೆ ಉಂಟಾಗಿದೆ. ಆರೋಗ್ಯದಲ್ಲಿ ಏರುಪೇರಾದ ಕಾರಣ ಆತನ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಕರೆದುಕೊಂಡು ಹೋಗಿದ್ದಾರೆ. ಆದರೆ, ಯಾವ ಆಸ್ಪತ್ರೆಯೂ ರೋಗಿಗೆ ಚಿಕಿತ್ಸೆ ನೀಡದೆ ನಿರಾಕರಿಸಿದ್ದಾರೆ. ಬೆಂಗಳೂರಿನ 18 ಪ್ರಮುಖ ಆಸ್ಪತ್ರೆಗಳು ಹಾಸಿಗೆ ಕೊರತೆ ಹಾಗೂ ಐಸಿಯು ವಾರ್ಡ್‌ ಸಮಸ್ಯೆ ಇರುವ ಕಾರಣ ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಆರೋಗ್ಯ ಸಚಿವ ಶ್ರೀರಾಮುಲು ಎಲ್ಲ 18 ಆಸ್ಪತ್ರೆಗಳಿಗೂ ರೋಗಿಗೆ ಚಿಕಿತ್ಸೆ ನೀಡದಿರಲು ಕಾರಣ ಹೇಳಿ ಎಂದು ಶೋಕಾಸ್ ನೋಟಿಸ್ ನೀಡಿದ್ದಾರೆ.

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ನಿಯಂತ್ರಿಸುವಲ್ಲಿ ವಿಫಲ

Wed Jul 1 , 2020
ಕೊರೊನಾ ವೈರಸ್ ಸೋಂಕು ನಿಯಂತ್ರಿಸುವಲ್ಲಿ ಬಿಬಿಎಂಪಿ ಆಡಳಿತ ಸಂಪೂರ್ಣ ವಿಫಲವಾಗಿದ್ದು, ಮೂರು ದಿನ ಕಳೆದರೂ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುತ್ತಿಲ್ಲ. ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಪ್ರಾಣ ಬಿಡುತ್ತಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಹರಿಹಾಯ್ದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆದ ಕೌನ್ಸಿಲ್ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಅಬ್ದುಲ್ ವಾಜೀದ್, ”ಮುಂದಿನ ಆಗಸ್ಟ್ ವೇಳೆಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೪.೪೦ ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ. ಅದಕ್ಕೆ […]

Advertisement

Wordpress Social Share Plugin powered by Ultimatelysocial