ಚಿತ್ರೀಕರಣ ಆರಂಭಿಸಲು ಸಿಎಂ ಗೆ ಮನವಿ

ಕೊರೊನಾ ಕಾರಣದಿಂದಾಗಿ ಕರ್ನಾಟಕದಾದ್ಯಂತ ಎಲ್ಲಾ ರೀತಿಯ ಚಿತ್ರೀಕರಣಗಳೂ ಬಂದ್ ಆಗಿದೆ. ನಾಳೆಯಿಂದ ಲಾಕ್​ಡೌನ್​ ಮತ್ತಷ್ಟು ಸಡಿಲಿಕೆಯಾಗಿದ್ದು, ರೆಡ್​ ಝೋನ್​​ ಹೊರತುಪಡಿಸಿ ಉಳಿದೆಡೆ ಹಲವು ಚಟುವಟಿಕೆಗಳ ಪುನರಾರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಗ್ರೀನ್ ಮತ್ತು ಆರೆಂಜ್ ಝೋನ್‌ಗಳಲ್ಲಿ ಲಾಕ್‌ಡೌನ್ ಸಡಿಲಿಕೆಯಾಗಲಿರೋ ಹಿನ್ನೆಲೆ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಅನುಮತಿ ನೀಡಬೇಕೆಂದು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಬಳಿ ಮನವಿ ಮಾಡಿದ್ದಾರೆ. ಕೊರೊನಾ ಭಾರತಕ್ಕೆ ಪ್ರವೇಶವಿಟ್ಟ ಕೆಲವೇ ದಿನಗಳಲ್ಲಿ ಮುಂಜಾಗೃತೆಯಾಗಿ ಚಿತ್ರೀಕರಣಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಯಿತು. ರಾಜ್ಯದಲ್ಲೂ ಈ ಆದೇಶಗಳು ಬೇಗನೇ ಜಾರಿಗೆ ಬಂದವು.  ಮೇ 11ರಿಂದ ಶೂಟಿಂಗ್ ಪ್ರಾರಂಭಿಸಲು ರಾಜ್ಯ ಸರ್ಕಾರದ ವತಿಯಿಂದ ಅನುಮತಿ ಕೊಡಿ. ಧಾರಾವಾಹಿ, ರಿಯಾಲಿಟಿ ಶೋ ಗಳನ್ನು ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ಮಾಡುತ್ತಿವೆ. ಚಿತ್ರೀಕರಣ ಬಂದ್ ಆಗಿರುವುದರಿಂದ ಅವರಿಗೆ ತೊಂದರೆ ಆಗಿದೆ. ಮೇ 4ರಂದು ರಾಜ್ಯದಲ್ಲಿ ಗ್ರೀನ್ ಮತ್ತು ಆರೆಂಜ್ ಝೋನ್‌ಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಆಗುತ್ತಿದೆ. ಇದೇ ನಿಟ್ಟಿನಲ್ಲಿ ನಮ್ಮ ಕ್ಷೇತ್ರಕ್ಕೂ ಸಡಿಲಿಕೆ ಮಾಡಿ. ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಅನುಮತಿ ನೀಡಿದ್ರೆ ಒಳ್ಳೆಯದಾಗುತ್ತೆ. ಆಂದಾಜು 120 ಧಾರಾವಾಹಿಗಳ ಶೂಟಿಂಗ್ ನಡೆಯುತ್ತಿದ್ದು, 20 ಸಾವಿರ ಕಲಾವಿದರು, ತಂತ್ರಜ್ಞರು ಇದರ ಮೇಲೆ ಆವಲಂಬಿತರಾಗಿದ್ದಾರೆ. ಹೀಗಾಗಿ, ನಮ್ಮ ಕ್ಷೇತ್ರಕ್ಕೆ ಅನುಮತಿ ಅವಶ್ಯಕತೆ ಇದೆ. ನೀವು ಅನುಮತಿ ನೀಡಿದ್ರೆ, ಆ ಕುಟುಂಬಗಳು ನಿರಾಳವಾಗಿ ಜೀವನ ಸಾಗಿಸಲು ಅನುವು ಮಾಡಿಕೊಟ್ಟ ಹಾಗೇ. ಸರ್ಕಾರ ಅನುಮತಿ ನೀಡಿದರೆ, ಸಾಮಾಜಿಕ ಅಂತರ ಕಾಯ್ದುಕೊಂಡು ಚಿತ್ರೀಕರಣ ಮಾಡಲಾಗುತ್ತದೆ. ಶೂಟಿಂಗ್ ಲೋಕೇಷನ್‌ಗಳಲ್ಲಿ 20ಕ್ಕಿಂತ ಅಧಿಕ ತಂತ್ರಜ್ಞರು, ಕಲಾವಿದರು ಸೇರದ ಹಾಗೆಯೂ ಎಚ್ಚರಿಕೆ ವಹಿಸಲಾಗುತ್ತದೆ ಎಂದು ಶಿವಕುಮಾರ್ ವಿನಂತಿಸಿದ್ದಾರೆ. ಈ ಸಮಯದಲ್ಲಿ ನಟಿ ತಾರಾ ಸಹ ಇದ್ದರು.

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್ ವಿರುದ್ಧ ಹೋರಾಟಕ್ಕೆ ಕೈಜೋಡಿಸಿದ WHO, ಯುರೋಪಿಯನ್ ಬ್ಯಾಂಕ್

Sun May 3 , 2020
ಹೈದರಾಬಾದ್: ಕೊರೊನಾ ವೈರಸ್‌ನ ಸಂಕಷ್ಟದಿಂದ  ತೀವ್ರವಾಗಿ ಬಳಲುತ್ತಿರುವ ರಾಷ್ಟ್ರಗಳ ಸಹಾಯಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ) ಮತ್ತು ಯುರೋಪಿಯನ್ ಇನ್ವೆಸ್ಟಮೆಂಟ್ ಬ್ಯಾಂಕ್ (ಇಐಬಿ) ಕೈಜೋಡಿಸಿವೆ. ಇಐಬಿ ವಿಶ್ವದ ಅತಿದೊಡ್ಡ ಸಾರ್ವಜನಿಕ ಬ್ಯಾಂಕ್ ಆಗಿರುವುದು ಗಮನಾರ್ಹ. ಕೋವಿಡ್ ಪರಿಣಾಮದಿಂದ ಆಫ್ರಿಕಾ ದೇಶಗಳಲ್ಲಿ ಉದ್ಭವಿಸಿರುವ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ಬಿಕ್ಕಟ್ಟುಗಳ ನಿವಾರಣೆಗೆ ಇಐಬಿ ೧.೪ ಬಿಲಿಯನ್ ಯುರೋ ಹಣಕಾಸು ಸಹಾಯ ನೀಡಲಿದೆ. ವಿಶ್ವಸಂಸ್ಥೆಯ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ಅನುಭವ ಹಾಗೂ ಹಣಕಾಸು […]

Advertisement

Wordpress Social Share Plugin powered by Ultimatelysocial