ಜಗತ್ತಿನ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರ

ವಿಶ್ವದಲ್ಲೇ ಅತಿದೊಡ್ಡ ಕೋವಿಡ್-ಆರೈಕೆ ಕೆಂದ್ರವೆಂದು ಹೆಸರಾದ ಹತ್ತು ಸಾವಿರ ಹಾಸಿಗೆಗಳ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಇಂದು ಇಲ್ಲಿನ ರಾಧಾ ಸೋಮಿ ಸತ್ಸಂಗ್ ಬಿಯಾಸ್‌ನಲ್ಲಿ ಉದ್ಘಾಟಿಸಿದರು. ಸೌಮ್ಯ ಮತ್ತು ಲಕ್ಷಣರಹಿತ ಕರೊನಾವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಛತ್ತಾಪುರದಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಕೇಂದ್ರವು 1,700 ಅಡಿ ಉದ್ದ, 700 ಅಡಿ ಅಗಲ ಇದ್ದು 200 ಆವರಣಗಳನ್ನು ಹೊಂದಿದೆ. ತಲಾ ಒಂದೊಂದು ಆವರಣದಲ್ಲಿ 50 ಹಾಸಿಗೆಗಳ ಸೌಲಭ್ಯವಿದೆ. ಇದು ವಿಶ್ವದಲ್ಲೇ ಅತಿ ದೊಡ್ಡದಾಗಿದೆ ಎಂದು ಇದರ ಅಧಿಕಾರಿಗಳು ಹೇಳಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಕಾಡುಸಿದ್ದೇಶ್ವರ ಮಠಕ್ಕೆ ಡಿಕೆಶಿ ಭೇಟಿ

Sun Jul 5 , 2020
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದ್ದು, ಕಾಡಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಡಾ.ಶ್ರೀಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಅವರ, ಆಶೀರ್ವಾದ ಪಡೆದುಕೊಂಡರು. ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಶ್ರೀಮಠಕ್ಕೆ ಭೇಟಿ ನೀಡಿದ ಅವರು ಪಕ್ಷದ ಸಂಘಟನೆ ಮತ್ತು ಪಕ್ಷವನ್ನು ಹೇಗೆ ಅಧಿಕಾರಕ್ಕೆ ತರಬೇಕೆಂಬುದರ ಬಗ್ಗೆ […]

Advertisement

Wordpress Social Share Plugin powered by Ultimatelysocial