ಜನ್ಮದಿನದಂದೇ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಆರು ತಿಂಗಳು ಪೂರ್ಣ

ಬೆಂಗಳೂರು, ಜನವರಿ 28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಇಂದು 62ನೇ ಜನ್ಮದಿನದ ಖುಷಿ ಒಂದು ಕಡೆಯಾದರೆ, ಮತ್ತೊಂದೆಡೆ ಬೊಮ್ಮಾಯಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಸರ್ಕಾರದ ಸಾಧನೆ ತಿಳಿಸುವ ಕೈಪಿಡಿ ಬಿಡುಗಡೆ ಮಾಡಲಾಗುತ್ತದೆ.ಕಳೆದ ವರ್ಷ ಜುಲೈ 28ರಂದು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು, ರೈತರ ಮಕ್ಕಳಿಗೆ ವಿದ್ಯಾನಿಧಿ ಸೇರಿದಂತೆ ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ. ಆಡಳಿತ ಸುಧಾರಣೆ ಸೇರಿದಂತೆ ರಾಜ್ಯದ ಸಮಗ್ರ ಅಭಿವದ್ಧಿಗೆ ಕ್ರಮ ಕೈಗೊಂಡಿದ್ದಾರೆ.ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮದು ಸ್ಪಂದನಶೀಲ ಸರ್ಕಾರವಾಗಿದ್ದು, ಇದಕ್ಕೆ 100 ದಿನ ಅಥವಾ ಅರು ತಿಂಗಳು ಅಥವಾ ಯಾವುದೇ ಸಮಯ ಮುಖ್ಯವಲ್ಲ. ನಿರಂತರವಾಗಿ ಜನರ ಅಗತ್ಯಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವ ಆರು ತಿಂಗಳು ಪೂರ್ಣಗೊಂಡಿರುವ ಪಕ್ಷಿನೋಟ ತಿಳಿಸಲು ಕೈಪಿಡಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ರೈತರು, ಜನರ ನೆರವಿಗೆ ಸಂದರ್ಭಕ್ಕೆ ಕಾಯುವ ಅಗತ್ಯವಿಲ್ಲ. ಆಯಾ ಸಂದರ್ಭಕ್ಕೆ ತಕ್ಕಂತೆ ನೆರವು ನೀಡಲಾಗುವುದು ಎಂದು ಹೇಳಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಎಂದೂ ಅದ್ಧೂರಿ ಜನ್ಮದಿನ ಆಚರಿಸಿಕೊಂಡಿಲ್ಲ. ಈ ಬಾರಿಯೂ ಆಚರಣೆ ಮಾಡುವುದಿಲ್ಲವೆಂದು ಹೇಳಲಾಗಿದೆ.ಆದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮ್ಮ ಆರ್‌ಟಿ ನಗರದ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.ಆದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮ್ಮ ಆರ್‌ಟಿ ನಗರದ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.ಚುನಾವಣೆಯ ಅಗ್ನಿಪರೀಕ್ಷೆ ಇದೀಗ ಮುಂಬರುವ ಬಿಬಿಎಂಪಿ ಚುನಾವಣೆ ಮತ್ತು ಜಿ.ಪಂ ಹಾಗೂ ತಾ.ಪಂ. ಚುನಾವಣೆಗಳು ಮುಖ್ಯಮಂತ್ರಿ ಬೊಮ್ಮಾಯಿ ಅವರ ಪಾಲಿಗೆ ಅಗ್ನಿ ಪರೀಕ್ಷೆಯಂತೆ ಎದುರಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಈಗ ಪಕ್ಷದಲ್ಲಿ ಕೇಳಿಬರುತ್ತಿರುವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯನ್ನೂ ಸಮರ್ಥವಾಗಿ ಎದುರಿಸುವುದು ಬೊಮ್ಮಾಯಿ ಅವರ ಪಾಲಿಗೆ ಸವಾಲಾಗಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಆದ್ಯತೆಯ ಕೆಲಸವಾಗಿದೆ.

ಕೈಪಿಡಿ ಮೂಲಕ ಸಾಧನೆಗಳ ಪ್ರಚಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಆರು ತಿಂಗಳ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. 2023ರವರೆಗಿನ ಸರ್ಕಾರದ ಕಾರ್ಯಕ್ರಮಗಳು, ಈ ಆರು ತಿಂಗಳ ಅವಧಿಯಲ್ಲಿ ಸರ್ಕಾರದ ಪ್ರಮುಖ ಇಲಾಖೆಗಳ ಸಾಧನೆಗಳ ಬಗ್ಗೆ ಮುಂದಿನ ಒಂದು ವಾರದ ಕಾಲ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳ ಮೂಲಕ ಪ್ರಚಾರ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಸಚಿವರು ತಮ್ಮ ಇಲಾಖೆಗಳಿಗೆ ತಿಳಿಸಲು ಸೂಚನೆ ನೀಡಲಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಪ್ರಮುಖ ಸಾಧನೆಗಳು

1. ರೈತ ಮಕ್ಕಳಿಗೆ ವಿದ್ಯಾನಿಧಿ ಸ್ಕಾಲರ್‌ಶಿಪ್‌

2. 12 ಜಿಲ್ಲೆಗಳ 3026 ಗ್ರಾಪಂಗಳಲ್ಲಿ ಗ್ರಾಮ ಒನ್ ಸ್ಥಾಪನೆ

3. ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಹೆಸರು

4. ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಉದ್ಘಾಟನೆ

5. 250 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ

6. ರಾಜ್ಯದಲ್ಲಿ ಆನ್‌ಲೈನ್‌ ಜೂಜು, ಬೆಟ್ಟಿಂಗ್ ನಿಷೇಧ ಕಾನೂನು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

Carrot Leaf ಆರೋಗ್ಯಕ್ಕೆ ಬೆಸ್ಟ್‌ ಮದ್ದು

Fri Jan 28 , 2022
  ಪ್ರಮುಖ ಪ್ರಯೋಜನಗಳಲ್ಲಿ ಒಂದೆಂದರೆ ಅದರ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ. ಕ್ಯಾರೆಟ್ ಎಲೆಗಳಲ್ಲಿರುವ ವಿಟಮಿನ್ ಸಿ ಪ್ರಮಾಣ ಬೇರುಗಳಲ್ಲಿರುವ ವಿಟಮಿನ್ ಸಿ ಗಿಂತಲೂ ಸುಮಾರು ಆರು ಪಟ್ಟು ಹೆಚ್ಚು! ಅದಕ್ಕಾಗಿಯೇ ಕ್ಯಾರೆಟ್ ಎಲೆಗಳು ನಮ್ಮ ಮುಂದಿನ ಚಿಕನ್ ಸೂಪ್ ಅಥವಾ ಸಲಾಡ್ ಗೆ ಉಪಯುಕ್ತ ಸೇರ್ಪಡೆಗಳಾಗಿರಬಹುದು. ಏಕೆಂದರೆ ಇತರ ಪದಾರ್ಥಗಳೊಂದಿಗೆ ಸಂಯೋಜಿಸಿ, ಅವು ರೋಗನಿರೋಧಕ ವ್ಯವಸ್ಥೆಯನ್ನು ಹೆಚ್ಚಿಸುವಲ್ಲಿ ಒಟ್ಟಿಗೆ ಕೆಲಸ ಮಾಡಬಹುದು. ಜೀರ್ಣಾಂಗ ವ್ಯವಸ್ಥೆ ಕ್ಲೋರೋಫಿಲ್ ನ ನಿರ್ವಿಷಗೊಳಿಸುವ […]

Advertisement

Wordpress Social Share Plugin powered by Ultimatelysocial