ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ :ಖಂಡ್ರೆ

ಬೆಂಗಳೂರು: ರಾಜ್ಯಕ್ಕೆ ಮರಳಲಿಚ್ಚಿಸುವ ಕನ್ನಡಿಗರಿಗೆ ಸರ್ಕಾರದಿಂದ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನ್ಯಾಯವಾಗಿದೆ ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ. ಇರುವಾಗಲೇ ಬದುಕು ಕಲ್ಪಿಸುವುದು ಸರ್ಕಾರದ ಕರ್ತವ್ಯ. ವಲಸೆ ಕಾರ್ಮಿಕರ ವಿಚಾರದಲ್ಲಿ ಮಾನವೀಯತೆಯಿಂದ ವರ್ತಿಸಿ ಲಾಕ್​ಡೌನ್ ಅವಧಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದೆ ಸರ್ಕಾರ ಅಥವಾ ದಾನಿಗಳು ನೀಡುವ ದವಸ, ಧಾನ್ಯಕ್ಕೆ ಕೈಯೊಡ್ಡಲು ಮನಸ್ಸು ಒಪ್ಪದೆ ಸಾವಿರಾರು ಸ್ವಾಭಿಮಾನಿ ಕಾರ್ಮಿಕರು ತಮ್ಮ ತಮ್ಮ ಊರಿಗೆ ಮರಳಲು ಉತ್ಸುಕರಾಗಿದ್ದಾರೆ. ಇವರ ವಿಚಾರದಲ್ಲಿ ಸರ್ಕಾರ ಮಾನವೀಯತೆಯಿಂದ ವರ್ತಿಸಬೇಕು. ಹೊರ ರಾಜ್ಯಗಳಿಗೆ ಹೋಗಿ ದುಡಿಯುತ್ತಿರುವ ಲಕ್ಷಾಂತರ ಕನ್ನಡಿಗರ ಪೈಕಿ ಪ್ರಸ್ತುತ 91,077ಕ್ಕೂ ಹೆಚ್ಚು ಜನರು ರಾಜ್ಯಕ್ಕೆ ಮರಳಲು ಸೇವಾ ಸಿಂಧು ವೆಬ್​ಸೈಟ್​ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ಈವರೆಗೆ 706 ಜನರಿಗೆ ಅನುಮತಿ ನೀಡಿದೆ. ಇನ್ನೂ 51,241ಕ್ಕೂ ಹೆಚ್ಚು ಅರ್ಜಿ ವಿಲೇವಾರಿ ಮಾಡದೆ ಸರ್ಕಾರ ವಿಳಂಬ ಮಾಡುತ್ತಿದೆ. ಕೆಲವು ಅರ್ಜಿಗಳು ಜಿಲ್ಲಾಧಿಕಾರಿಗಳ ಬಳಿಯೇ ಇವೆ. ಈಗಾಗಲೇ 40 ದಿನಗಳಿಂದ ಹಲವರು ತಿನ್ನಲು ಊಟ ಇಲ್ಲದೆ, ಕೈಯಲ್ಲಿ ಹಣವೂ ಇಲ್ಲದೆ ಕಂಗಾಲಾಗಿದ್ದಾರೆ. ಇಂಥ ಜನರ ವಿಚಾರದಲ್ಲಿ ಸರ್ಕಾರ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಸೆಕ್ಸಿ ಕ್ವೀನ್ ಬರ್ತಡ ಸೆಲೆಬ್ರೆಷನ್

Sun May 10 , 2020
ಸೆಕ್ಸಿಲುಕ್, ಮಾದಕ ಮೈಮಾಟ ಅಂದ್ರೆ ನೆನಪಾಗೋದೆ ಬಬ್ಲಿ ಬ್ಯೂಟಿ ನಮಿತಾ. ಇಂದು ಕಾಲಿವುಡ್, ಸ್ಯಾಂಡಲ್‍ವುಡ್ ನಟಿ ನಮಿತಾ ಹುಟ್ಟಿದ ದಿನ. ಗುಜರಾತ್ ರಾಜ್ಯದ ಸುರತ್ ನಲ್ಲಿ ಜನಿಸಿದ ನಮಿತಾ ೨೦೦೨ರಲ್ಲಿ ತೆಲುಗಿನ ‘ಸ್ವತಂ’ ಚಿತ್ರದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟರು. ರವಿಚಂದ್ರನ್ ಅಭಿನಯದ ನೀಲಕಂಠದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ಬಳಿಕ ರ‍್ಶನ್ ಜೊತೆಗೆ ಇಂದ್ರ ಚಿತ್ರದಲ್ಲೂ ಅಭಿನಯಿಸಿದ್ದಾರೆ. ಹೂ, ನಮಿತಾ ಐ ಲವ್ ಯೂ, ಬೆಂಕಿ ಬಿರುಗಾಳಿಯಲ್ಲೂ […]

Advertisement

Wordpress Social Share Plugin powered by Ultimatelysocial