ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್ ದಾಖಲಿಸಿದ್ದಾರೆ.

 

ಮುಂಬೈನ ಐಷಾರಾಮಿ ರೆಸ್ಟೋರೆಂಟ್ ಬಳಿ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟಿ ಹಾಗೂ ಸೋಶಿಯಲ್ ಮೀಡಿಯಾ ಇನ್ಫ್ಲುಯನ್ಸರ್ ಸಪ್ನಾ ಗಿಲ್, ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಮಹಿಳೆಯೊಬ್ಬರ ಘನತೆಗೆ ಧಕ್ಕೆ ತಂದಿರುವುದೂ ಸೇರಿದಂತೆ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಈ ಮೊದಲು ಪೃಥ್ವಿ ಶಾ ನೀಡಿದ ದೂರಿನಂತೆ ಮುಂಬೈನ ಓಶೀವಾರ ಠಾಣೆ ಪೋಲಿಸರು ಸಪ್ನಾ ಗಿಲ್ ಮತ್ತಾಕೆಯ ಗೆಳೆಯ ಶೋಭಿತ್ ಠಾಕೂರ್ ಸೇರಿದಂತೆ ಒಟ್ಟು ಎಂಟು ಮಂದಿ ವಿರುದ್ಧ ಕೇಸ್ ದಾಖಲಿಸಿದ್ದು, ಜಾಮೀನು ನೀಡುವ ಪ್ರಕರಣವಾಗಿರುವುದರಿಂದ ಸಪ್ನಾ ಗಿಲ್ ಹೊರಬಂದಿದ್ದಾರೆ.

ಘಟನೆಯ ಹಿನ್ನೆಲೆ: ಕ್ರಿಕೆಟಿಗ ಪೃಥ್ವಿ ಶಾ ಹಾಗೂ ಅವರ ಗೆಳೆಯ ಮುಂಬೈನ ರೆಸ್ಟೋರೆಂಟ್ ಒಂದಕ್ಕೆ ಡಿನ್ನರ್ ಗೆ ತೆರಳಿದ್ದ ವೇಳೆ ಸಪ್ನಾ ಗಿಲ್ ಮತ್ತಾಕೆಯ ಸ್ನೇಹಿತರು ಸೆಲ್ಫಿ ತೆಗೆಸಿಕೊಳ್ಳಲು ಮುಂದಾಗಿದ್ದರು. ಆ ಬಳಿಕ ಸೆಲ್ಫಿ ತೆಗೆದುಕೊಂಡರೂ ಸಹ ಮತ್ತೆ ಮತ್ತೆ ಒತ್ತಾಯಿಸಿದಾಗ ಪೃಥ್ವಿ ಶಾ ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಅವರುಗಳು ಪೃಥ್ವಿ ಶಾ ಮತ್ತವರ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಇದೀಗ ಪೃಥ್ವಿ ಶಾ ವಿರುದ್ಧ ಪ್ರತಿ ದೂರು ದಾಖಲಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಾಯಕ ʻಸೋನು ನಿಗಮ್ʼ ಮೇಲೆ ಶಾಸಕನ ಪುತ್ರನಿಂದ ಹಲ್ಲೆ, ಪ್ರಕರಣ ದಾಖಲು!

Tue Feb 21 , 2023
ಮುಂಬೈ: ಸೋಮವಾರ ಸಂಜೆ ಚೆಂಬೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕ ಪ್ರಕಾಶ್ ಫಟರ್ಪೇಕರ್ ಅವರ ಪುತ್ರ ಸ್ವಪ್ನಿಲ್ ಫಟರ್ಪೇಕರ್ ಅವರು ಗಾಯಕ ಸೋನು ನಿಗಮ್ಮ ತ್ತು ಅವರ ತಂಡದ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಸೋನು ಅವರ ತಂಡದ ವ್ಯಕ್ತಿ ಎಂದು ಹೇಳಲಾದ ವ್ಯಕ್ತಿಯನ್ನು ವೇದಿಕೆಯಿಂದ ಕೆಳಕ್ಕೆ ತಳ್ಳಿರುವುದನ್ನು ನೋಡಬಹುದು. ಸದ್ಯಕ್ಕೆ, ಉದ್ದೇಶಿತ ವೀಡಿಯೊವನ್ನು ಪರಿಶೀಲಿಸಲಾಗುತ್ತಿದೆ ಮತ್ತು […]

Advertisement

Wordpress Social Share Plugin powered by Ultimatelysocial