ಜಾರ್ಖಂಡ್ ಸರ್ಕಾರ ಕಟ್ಟುನಿಟ್ಟಿನ ಕ್ರಮ

ಕೊರೊನಾ ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾರ್ಖಂಡ್ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ ವಿಧಿಸಲು ಸರ್ಕಾರ ಆದೇಧ ಹೊರಡಿಸಿದೆ. ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 12 ಲಕ್ಷ ಗಡಿ ದಾಟಿದ್ದು, ಲಸಿಕೆ ಬರುವವರೆಗೂ ಕೊರೊನಾ ವೈರಸ್ ವಿರುದ್ಧ ಧೈರ್ಯದಿಂದ ಹೋರಾಡಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 45, 720 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 12 ಲಕ್ಷಕ್ಕೆ ಏರಿಕೆ ಆಗಿದೆ. ಒಂದು ದಿನದಲ್ಲಿ 1,129 ಸಾವಿನೊಂದಿಗೆ  ದೇಶದಲ್ಲಿ  ಮೃತರ  ಸಂಖ್ಯೆ  29,861ಕ್ಕೆ ಏರಿಕೆಯಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಕ್ರಿಕೆಟ್‌ನಲ್ಲಿ 12ನೇ ವಸಂತ ಪೂರೈಸಿದ ಕೊಹ್ಲಿ

Thu Jul 23 , 2020
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ 1000ನೇ ಪೋಸ್ಟ್ ಅನ್ನು ವಿಶೇಷ ರೀತಿಯಲ್ಲಿ ಸಂಭ್ರಮಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 12 ವರ್ಷಗಳ ಕಾಲ ಆಡುತ್ತ ಕಲಿತಿರುವೆ ಎಂದು   ಅವರು ಈ ಪೋಸ್ಟ್ ಮೂಲಕ ತಿಳಿಸಿದ್ದು, ತಮ್ಮೊಂದಿಗೆ ತಾವೇ ಬ್ಯಾಟಿಂಗ್ ಮಾಡುತ್ತಿರುವ ರೀತಿಯಲ್ಲಿ ತಮ್ಮದೇ 2 ಚಿತ್ರಗಳು ಎಡಿಟ್ ಮಾಡಿ ಪ್ರಕಟಿಸುವ ಮೂಲಕ ಗಮನಸೆಳೆದಿದ್ದಾರೆ. ‘2008-2020ರ  ಈ ದಾರಿಯಲ್ಲಿ ಸಾಕಷ್ಟು ಕಲಿತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಚಿರಋಣಿಯಾಗಿದ್ದೇನೆ. […]

Advertisement

Wordpress Social Share Plugin powered by Ultimatelysocial