ಜಿ-20 ಶೃಂಗಸಭೆ ಔತಣಕೂಟದಲ್ಲಿ ಪಾಲ್ಗೊಳ್ಳುತ್ತಿಲ್ಲ-ಹೆಚ್. ಡಿ. ದೇವೇಗೌಡ

HD Deve Gowda Birthday: ಇಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಹುಟ್ಟುಹಬ್ಬ;  ಟ್ವೀಟ್​ ಮೂಲಕ ಶುಭ ಹಾರೈಸಿದ ಬಿ.ಎಸ್​ ಯಡಿಯೂರಪ್ಪ - Kannada News | Hd deve gowda  birthday cm bs yediyurappa wishes ...
ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಹಾಗೂ ಹೆಚ್. ಡಿ. ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಆರೋಗ್ಯದ ಕಾರಣದಿಂದ ಜಿ20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಶುಕ್ರವಾರ ಹೇಳಿದ್ದಾರೆ.
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಹಾಗೂ ಹೆಚ್. ಡಿ. ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಆರೋಗ್ಯದ ಕಾರಣದಿಂದ ಜಿ20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಹೈ-ಪ್ರೊಫೈಲ್ ಔತಣಕೂಟಕ್ಕೆ ಆಹ್ವಾನಿತರಾಗಿರುವ ದೇವೇಗೌಡರು, ತಮ್ಮ ನಿರ್ಧಾರವನ್ನು ಸರ್ಕಾರಕ್ಕೆ ತಿಳಿಸಿದ್ದು, ಜಿ20 ಶೃಂಗಸಭೆ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಅವರು ಮಾಹಿತಿ ನೀಡಿದ್ದಾರೆ.

ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವದಾದ್ಯಂತ ಗಣ್ಯರು ದೆಹಲಿಗೆ ಆಗಮಿಸಲು ಪ್ರಾರಂಭಿಸಿದ್ದಾರೆ. ಜಿ20 ಶೃಂಗಸಭೆ ನಿಮಿತ್ತ ಸೆಪ್ಟೆಂಬರ್ 9ರಂದು ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟಕ್ಕೆಂದು ಕಳುಹಿಸಿರುವ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿಯನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ದೇಶಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದ್ದು, ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ಕೇಳಿಬರುತ್ತಿವೆ.
Please follow and like us:

tmadmin

Leave a Reply

Your email address will not be published. Required fields are marked *

Next Post

150 ಕೋಟಿ ಗಳಿಕೆ ಮಾಡಿದ ಶಾರುಖ್‌ ಅಭಿನಯದ "ಜವಾನ್" ಸಿನೆಮಾ:

Fri Sep 8 , 2023
ಶಾರುಖ್‌ ಅಭಿನಯದ “ಜವಾನ್” ಸಿನೆಮಾವು ಸೆಪ್ಟೆಂಬರ್‌ 7 ರಂದು ವಿಶ್ವಾದ್ಯಂತ ಬಿಡುಗಡೆಯಾಗಿದ್ದು ಪ್ರೇಕ್ಷರಿಂದ ಭರ್ಜರಿ ರೆಸ್ಪಾನ್ಸ್‌ ಪಡೆದಿದೆ ಹಾಗು ಒಂದೇ ದಿನದಲ್ಲಿ 150 ಕೋಟಿ ಗಳಿಕೆ ಮಾಡಿದೆ. ಭಾರತದಲ್ಲೇ 75 ಕೋಟಿಯನ್ನು ಗಳಿಸಿದೆ ಎಂದು ಮೂಲಗಳು ತಿಳಿಸಿವೆ. ವಿಶೇಷವೆಂದರೆ, ಶಾರುಖ್ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಪಠಾಣ್‌ ಸಿನಿಮಾ ಮೊದಲ ದಿನದಲ್ಲಿ 55 ಕೋಟಿ ಗಳಿಸುವ ಮೂಲಕ ಆರಂಭಿಕ ದಿನದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿತ್ತು. ಈಗ ಜವಾನ್‌ […]

Advertisement

Wordpress Social Share Plugin powered by Ultimatelysocial