ಜುಲೈ ೫ರಿಂದ ಶಾಲೆ ಆರಂಭ-ಸಚಿವ ಸುರೇಶ್ ಕುಮಾರ್ ಸುಳಿವು

ಜುಲೈ ೫ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಜುಲೈ ೫ರಿಂದ ಶಾಲೆಯನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ಆದರೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ ಆಸಕ್ತಿ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಚಿಂತನೆ ನಡೆದಿದೆ. ಈಗಾಗಲೇ ೧ರಿಂದ ೬ನೇ ತರಗತಿ ಹಾಗೂ ೬ರಿಂದ ೧೦ನೇ ತರಗತಿ ವರೆಗೂ ಶಾಲೆಗಳನ್ನು ಆರಂಭಿಸುವ ಕುರಿತು ಕೇಂದ್ರ ಸರಕಾರಿದಿಂದ ಮಾರ್ಗಸೂಚಿ ಬಂದಿದೆ. ಇದನ್ನು ಪರಿಶೀಲಿಸಿ ರಾಜ್ಯ ಸರಕಾರ ನೂತನ ಮಾರ್ಗಸೂಚಿ ಹೊರಡಿಸಲಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಧರಣಿ

Mon Jun 29 , 2020
ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ, ಬ್ಯಾರಲ್‌ಗೆ ೧೩೦ ರೂ ಡಾಲರ್ ಇದ್ದರೂ, ಇಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿದ್ದಾರೆ. ನನ್ನ ಪ್ರಕಾರ ಪೆಟ್ರೋಲ್‌ಗೆ ೨೫ ರೂ ಮಾಡಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸತತ ತೈಲ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ಸೈಕಲ್ ಸವಾರಿ ಮಾಡಿದರು. ಇದಕ್ಕೂ ಮೊದಲು ಮಾತನಾಡಿದ ಅವರು, ಕೇಂದ್ರದಲ್ಲಿ ಮನಮೋಹನ್ ಸಿಂಗ್ […]

Advertisement

Wordpress Social Share Plugin powered by Ultimatelysocial