ಟ್ವೀಟ್ ಮೂಲಕ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತಗಳಿಂದ ಎಚ್ಚರಿಕೆ ಫಲಕಗಳನ್ನು ಹಾಕುತ್ತಿರುವುದು ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸೋಂಕಿತ ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕೆಂದು ಹೇಳಿದ್ದಾರೆ. ಸೋಂಕಿತರ ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಜಾಗೃತಿ ಅರಿವು ಮೂಡಿಸಬೇಕು. ಮನೆಯಿಂದ ಹೊರಬರದಂತೆ ಅವರ ಜವಾಬ್ದಾರಿಗಳನ್ನು ಅವರಿಗೆ ತಿಳಿಸಿಕೊಡಬೇಕು. ಅದು ಬಿಟ್ಟು ಅವರನ್ನು ಅವಮಾನಿಸುವುದು ಬೇಡ. ಇದರ ಬಗ್ಗೆ ಮುಖ್ಯಮಂತ್ರಿಗಳು ಕೂಡಲೇ ಗಮನಹರಿಸಬೇಕು ಎಂದರು. ನಂತರ ಕುಮಾರಸ್ವಾಮಿಯವರು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವುದು ಆಸ್ಪತ್ರೆಗಳ ತಪ್ಪು. ಆ ಕಾರಣಕ್ಕೆ ಮೆಡಿಕಲ್ ಕಾಲೇಜುಗಳ ಲೈಸೆನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಇಂತಹ ತ್ವರಿತ ಪರಿಸ್ಥಿತಿಯಲ್ಲಿ ಅದರಿಂದ ಲಾಭವಾಗುವುದಿಲ್ಲ. ಮೆಡಿಕಲ್ ಕಾಲೇಜುಗಳ ಲೈಸೆನ್ಸ್ ರದ್ದು ಮಾಡುವ ಅಧಿಕಾರ ಇರುವುದು ಎಂಸಿಐಗೆ, ಸರ್ಕಾರಕ್ಕಲ್ಲ. ಖಾಸಗಿ ಕಾಲೇಜುಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರಿಂದ ಸೇವೆ ಪಡೆಯುವ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಟ್ವೀಟ್ ಮೂಲಕ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ

Sun Jul 19 , 2020
ಕೋವಿಡ್ ಮತ್ತು ಕೋವಿಡ್ ಅಲ್ಲದ ಕಾಯಿಲೆಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಲಕ್ಷಣರಹಿತ ಮತ್ತು ಅಲ್ಪ ಲಕ್ಷಣವುಳ್ಳ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಮತ್ತು ಹೋಂ ಐಸೋಲೇಶನ್ ಮಾಡುವ ನಿಟ್ಟಿನಲ್ಲಿ ಸರಕಾರದ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದರು. ಖಾಸಗಿ ಆಸ್ಪತ್ರೆಗಳು ಲಕ್ಷಣರಹಿತ ಸೋಂಕಿತರನ್ನು ದಾಖಲು ಮಾಡಿಕೊಳ್ಳುವಂತಿಲ್ಲ. ರಾಜ್ಯದಲ್ಲಿ ಇದುವರೆಗೆ ೨೧,೭೭೫ ಜನರು ಗುಣಮುಖರಾಗಿದ್ದು, ರಾಜ್ಯದಲ್ಲಿ ೨೪,೯೦೯ ಕೊರೊನಾ ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ […]

Advertisement

Wordpress Social Share Plugin powered by Ultimatelysocial