ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಹಿನ್ನಲೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಹಿನ್ನಲೆ, ಡಿಕೆಶಿ ಹೇಳಿಕೆ ನೀಡಿದ್ದಾರೆ.ಜುಲೈ 2 ರಂದು ನಡೆಯಲಿರುವ ಪದಗ್ರಹಣ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಕಾರ್ಯಕ್ರಮ ಹೇಗೆ ನಡೆಸಬೇಕೆಂದು ಪಕ್ಷದ ಮುಖಂಡರ ಜತೆ ಚರ್ಚೆ ನಡೆಸಿದ್ದೇನೆ,ಪಕ್ಷದ ಕೆಲವರಿಗೆ ಜವಾಬ್ದಾರಿ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 150 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ, ಸರ್ಕಾರ ಏನ್ ಮಾಡ್ತಾ ಇದೆ ಅಂತ ನೋಡ್ತಿದ್ದೇನೆ ಎಂದು ಹೇಳಿದರು.

 

 

Please follow and like us:

Leave a Reply

Your email address will not be published. Required fields are marked *

Next Post

ಮಗುಚಿ ಬಿದ್ದ ಲಾರಿ

Wed Jun 24 , 2020
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ಮಂಗಳವಾರ ರಾತ್ರಿ ಬೋರ್‌ವೆಲ್ ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು  ಹೊರರಾಜ್ಯಗಳ ಇಬ್ಬರು ಮಧ್ಯಪ್ರದೇಶ ಹಾಗು ಮತ್ತೊಬ್ಬ ಛತ್ತೀಸ್ ಗಢ ವ್ಯಕ್ತಿಗಳೆಂದು ತಿಳಿದುಬಂದಿದೆ.ಗಾಯಗೊಂಡ ಇಬ್ಬರು ವ್ಯಕ್ತಿಗಳನ್ನು ಸಮೀಪದ‌ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Please follow and like us:

Advertisement

Wordpress Social Share Plugin powered by Ultimatelysocial