ತಾಯಿಯಾದ ನಟಿ ಪ್ರಿಯಾಂಕಾ ಚೋಪ್ರಾ .|Priyanka Chopra|

ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ, ಗಾಯಕ ನಿಕ್ ಜೊನಾಸ್ ಅವರು ಬಾಡಿಗೆ ತಾಯ್ತನದ (ಸರೊಗಸಿ) ಮೂಲಕ ಮಗು ಪಡೆದಿದ್ದಾರೆ.

ಈ ವಿಚಾರವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪ್ರಿಯಾಂಕಾ, ‘ನಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದೇವೆ.

ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ನಮ್ಮ ಖಾಸಗಿತನವನ್ನು ಗೌರವಿಸಬೇಕು ಎಂದು ಕೇಳಿಕೊಳ್ಳುತ್ತೇನೆ. ಈಗ ನಮ್ಮ ಕುಟುಂಬದ ಮೇಲೆ ಗಮನ ಹರಿಸಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ.

ಆದರೆ, ಮಗು ಗಂಡೋ? ಹೆಣ್ಣೋ? ಎಂಬುದನ್ನು ಪ್ರಿಯಾಂಕಾ ಖಚಿತಪಡಿಸಿಲ್ಲ. ಪ್ರಿಯಾಂಕಾ ಹಾಗೂ ನಿಕ್ ಜೊನಾಸ್ 2018 ರ ಡಿಸೆಂಬರ್‌ನಲ್ಲಿ ಜೈಪುರದಲ್ಲಿ ಮದುವೆಯಾಗಿದ್ದರು. ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ.

ಈ ಸುದ್ದಿಯನ್ನು ಹಂಚಿಕೊಂಡಿದ್ದಕ್ಕೆ ನಿಕ್ ದಂಪತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು, ಹಿತೈಷಿಗಳು ಶುಭಾಶಯ ಕೋರುತ್ತಿದ್ದಾರೆ.

ಮಗು ಬೇಕೆಂದು ಇಚ್ಛಿಸಿದ ದಂಪತಿಯ ಪರವಾಗಿ ಗರ್ಭವನ್ನು ಧರಿಸಿ, ಒಂಬತ್ತು ತಿಂಗಳವರೆಗೆ ಭ್ರೂಣದ ಬೆಳವಣಿಗೆಗೆ ಸಹಕರಿಸಿ, ಹೆರಿಗೆ ಮಾಡಿಸಿಕೊಂಡ ಬಳಿಕ ಮಗುವನ್ನು ಅದರ ಪಾಲಕರಿಗೆ ಒಪ್ಪಿಸಲು ಬಾಡಿಗೆ ತಾಯಿ ಮತ್ತು ಅದರ ಪಾಲಕರ ಮಧ್ಯೆ ಮೊದಲೇ ಒಪ್ಪಂದ ಏರ್ಪಟ್ಟಿರುತ್ತದೆ. ಈ ರೀತಿ ಪ್ರಿಯಾಂಕಾ ದಂಪತಿ ಮಗು ಪಡೆದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

IPL:ಕ್ರಿಸ್ ಗೇಲ್ ಇಲ್ಲ, ಆದರೆ ಶ್ರೀಶಾಂತ್ ಐಪಿಎಲ್ ಹರಾಜಿನಲ್ಲಿ 1,214 ಆಟಗಾರರ ಪಟ್ಟಿಯಲ್ಲಿದ್ದಾರೆ;

Sun Jan 23 , 2022
IPL ಮೆಗಾ ಹರಾಜಿಗಾಗಿ ಬಹು ನಿರೀಕ್ಷಿತ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಮತ್ತು ಕೆಲವು ಉತ್ತೇಜಕ ಹೆಸರುಗಳಿದ್ದರೆ, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಮತ್ತು ಕ್ರಿಸ್ ಗೇಲ್ ಕೆಲವು ಗಮನಾರ್ಹ ಗೈರುಹಾಜರಿಯಾಗಿದ್ದಾರೆ. ಆದಾಗ್ಯೂ, ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ಪ್ರಕಾರ ಭಾರತದ ಮಾಜಿ ನಿಯಮಿತ ಮತ್ತು ಕೇರಳ ಬೌಲರ್ ಎಸ್ ಶ್ರೀಶಾಂತ್ ಅವರು ಅಚ್ಚರಿಯ ಸೇರ್ಪಡೆಯಾಗಿದ್ದಾರೆ. ಆಸ್ಟ್ರೇಲಿಯನ್ನರಾದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್, ಭಾರತದ ಸ್ಪಿನ್ನರ್‌ಗಳಾದ ಆರ್ ಅಶ್ವಿನ್ ಮತ್ತು ಯುಜ್ವೇಂದ್ರ ಚಾಹಲ್ ಸೇರಿದಂತೆ 49 […]

Advertisement

Wordpress Social Share Plugin powered by Ultimatelysocial