ತೃಣಮೂಲ ಕಾಂಗ್ರೆಸ್ ಸರಕಾರ ಕಿತ್ತೊಗೆಯಲು ಸಿದ್ಧ

ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಲದಲ್ಲಿ ರಾಜಕಾರಣದ ಅಪರಾಧೀಕರಣ ಹಾಗೂ ಭ್ರಷ್ಟಾಚಾರ ಎಲ್ಲೆ ಮೀರಿವೆ. ಇಂಥ ದುರುಳ ಸರಕಾರವನ್ನು ಕಿತ್ತೂಗೆಯುವ ಕಾಲ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಾಗ್ಧಾಳಿ ನಡೆಸಿದ್ದಾರೆ. ಜನ ಸಂಘದ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮ ದಿನಾಚರಣೆ ನಿಮಿತ್ತ ಕೋಲ್ಕತಾದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಜವಾಹರಲಾಲ್ ನೆಹರೂ ಅವರ ಅನುಕೂಲ ಸಿಂಧು ರಾಜಕಾರಣವನ್ನು ಆರಂಭದಿAದಲೇ ವಿರೋಧಿಸುತ್ತಾ ಬಂದಿದ್ದ ಶ್ಯಾಮ ಪ್ರಸಾದ್ ಮುಖರ್ಜಿ, ಭಾರತದ ಸಮಗ್ರ ಏಕತೆಗಾಗಿ ಹೋರಾಡಿದರು. ಇಂದು, ಅವರ ಕನಸು ನನಸಾಗಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮೋದಿ ಸರಕಾರ ಹಿಂಪಡೆದಿದೆ. ಇಂಥ ಸಂದರ್ಭದಲ್ಲೇ ನಾವು ಮುಖರ್ಜಿಯವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಿಜಕ್ಕೂ ಅರ್ಥಪೂರ್ಣವಾದ ವಿಚಾರ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರದ ಕೊರತೆಯಿಲ್ಲ

Tue Jul 7 , 2020
ದೇಶದಲ್ಲಿ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ ಎಂದು ಅವರು ಹೇಳಿದರು. ಹೊಸದಿಲ್ಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಕೇಂದ್ರ ಸಚಿವರು ಈ ಭರವಸೆ ನೀಡಿದರು. […]

Advertisement

Wordpress Social Share Plugin powered by Ultimatelysocial