ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ‌ಗೆ ೩ ಮಂದಿ ಬಲಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 3 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ನಿನ್ನೆವರೆಗೆ 1,359 ಪ್ರಕರಣ ದೃಢಪಟ್ಟಿದ್ದು, ಈ ಪೈಕಿ 683 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನು 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ತೂರಿನ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳದ 60 ವರ್ಷದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ವಿವಿಧ ಖಾಯಿಲೆಗಳಿಂದ ಮೂವರು ಬಳಲುತ್ತಿದ್ದು, ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

Wed Jul 8 , 2020
ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತು ಕೊಡಗು ಜಿಲ್ಲೆಯ ಗುಡ್ಡಗಾಡು ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿದಿದ್ದು, ಗುಡ್ಡ ಕುಸಿತವೂ ಉಂಟಾಗಿದೆ. ಇದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುಡ್ಡಗಾಡು ಪ್ರದೇಶದಲ್ಲಿ ವಾಸವಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು […]

Advertisement

Wordpress Social Share Plugin powered by Ultimatelysocial