ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಪತ್ರ ಬರೆದ BMTC ನೌಕರ

ಬೆಂಗಳೂರು: ಬಿಎಂಟಿಸಿ ನೌಕರರೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಬಿಎಂಟಿಸಿ ನೌಕರ ಶಂಬುಲಿಂಗಯ್ಯ ಚಿಕ್ಕಮಠ ಎಂಬುವವರು, ಹೊತ್ತಿನ ಊಟಕ್ಕೂ ಗತಿಯಿಲ್ಲ, ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ.

ನಮ್ಮ ಕುಟುಂಬ ಬೀದಿಗೆ ಬಿದ್ದಿದೆ. ನಾನು ಮುಷ್ಕರದಲ್ಲಿ ಕೂಡ ಭಾಗಿಯಾಗಿಲ್ಲ. ಆದರೂ ಬಿಎಂಟಿಸಿ ಅಧಿಕಾರಿಗಳು ನನ್ನನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಒಂದು ವರ್ಷದಿಂದ ಕೆಲಸವಿಲ್ಲದೇ ಪರದಾಡುತ್ತಿದ್ದೇನೆ ಹಾಗಾಗಿ ನನಗೆ ಹಾಗೂ ನನ್ನ ಪತ್ನಿ, ಮಕ್ಕಳಿಗೆ ದಯಾಮರಣ ನೀಡಿ ಎಂದು ಪತ್ರದಲ್ಲಿ ಬರೆದಿದ್ದಾರೆ.

ಕೆಲಸದ ಬಗ್ಗೆ ಸಾಕಷ್ಟು ಬಾರಿ ಸಾರಿಗೆ ಸಚಿವರಿಗೂ ಮನವಿ ಮಾಡಿದ್ದೇನೆ. ಆದರೂ ನನಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ನನಗೆ ದಯಾಮರಣ ನೀಡಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 10ರೊಳಗೆ ಸಂಪುಟ ಪುನಾರಚನೆ ನಿಶ್ಚಿತ: ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ

Sat May 7 , 2022
ಬೆಂಗಳೂರು:ಬಹು ನಿರೀಕ್ಷಿತ ಸಂಪುಟ ಪುನಾರಚನೆ ಮೇ 10ರೊಳಗೆ ನಡೆಯಲಿದೆ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಸಂಪುಟ ಪುನಾರಚನೆ ವಿಚಾರವಾಗಿ ದೆಹಲಿ ವರಿಷ್ಠರು ಕೈಗೊಳ್ಳುವ ತಿರ್ಮಾನಕ್ಕೆ ಬದ್ಧ ಎಂದರು. ಸಂಪುಟ ಪುನಾರಚನೆ ಅಥವಾ ವಿಸ್ತರಣೆಯ ವಿಚಾರವಾಗಿ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರವೇ ಅಂತಿಮವಾಗಿದೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ಈ ವಿಚಾರವಾಗಿ ಕೇಂದ್ರ ನಾಯಕರ ತೀರ್ಮಾನವೇ ಇದರಲ್ಲಿ ಅಂತಿಮ ಎಂದು ಹೇಳಿದರು. ಬಿಜೆಪಿ ಕೇಂದ್ರ ನಾಯಕತ್ವವು […]

Advertisement

Wordpress Social Share Plugin powered by Ultimatelysocial