ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‍ಐಆರ್

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬಗ್ಗೆ ತಿರುಚಿದ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿತ್ತು. ಈ  ಆರೋಪದ ಮೇಲೆ ಇಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅಂದಹಾಗೇ ಟ್ವಿಟರ್‌ನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹಳೇ ವಿಡಿಯೊವೊಂದನ್ನು ತಿರುಚಿ ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡುವ ಮೂಲಕ ಅವರ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಆದ ಕಾರಣ ಮಧ್ಯ ಪ್ರದೇಶದ ಮಾಜಿ ಸಚಿವ ಉಮಾಶಂಕರ್ ಗುಪ್ತಾ ಅವರ ನೇತೃತ್ವದಲ್ಲಿ ಬಿಜೆಪಿ ದೂರು ದಾಖಲಿಸಿತ್ತು. ಶೇರ್ ಮಾಡಿದ್ದ ವಿಡೀಯೋ ಫೇಕ್ ಎಂದು ಸಿಂಗ್ ವಿರುದ್ಧ, ಭೋಪಾಲ್‌ ಕ್ರೈಂ ಬ್ರ್ಯಾಂಚ್ ನಲ್ಲಿ ಎಫ್‍ಐಆರ್ ದೂರು ದಾಖಲಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ವಿಶ್ವನಾಥ್‌ಗೆ ಎಂಎಲ್‌ಸಿ ಟಿಕೆಟ್‌ ಆಶ್ವಾಸನೆ

Mon Jun 15 , 2020
ತೋಟಗಾರಿಕೆ ಸಚಿವ ನಾರಾಯಣಗೌಡ ರವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಮಾಜಿ ಸಚಿವ ಹೆಚ್.ವಿಶ್ವನಾಥ್ ಕೂಡ ಕಾರಣ ಅವರಿಗೆ ಕೊಟ್ಟ ಮಾತಿನಂತೆ ಹೈಕಮಾಂಡ್ ನಡೆದುಕೊಳ್ಳುತ್ತದೆ. ಎಚ್‌.ವಿಶ್ವನಾಥ್‌ ಅವರಿಗೆ ಖಂಡಿತವಾಗಿಯೂ ವಿಧಾನ ಪರಿಷತ್‌ ಟಿಕೆಟ್‌ ಸಿಗುತ್ತೆ. ಪಕ್ಷದ ಹೈಕಮಾಂಡ್‌ ಹಂತದಲ್ಲಿ ಈ ಬಗ್ಗೆ ಮಾತುಕತೆಯೂ ಆಗಿದೆ.  ಬಿಜೆಪಿಯಲ್ಲಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಹೆಚ್ಚಾಗಿರುವುದು ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳಬೇಕು.ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ತಿಳಿಸಿದ್ದರೆ. […]

Advertisement

Wordpress Social Share Plugin powered by Ultimatelysocial