ದಿನೇಶ್ ಗುಂಡೂರಾವ್‌ಗೂ ಕೊರೊನಾತಂಕ

ಕರ್ನಾಟಕ ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಗನ್‌ಮ್ಯಾನ್ ಸೇರಿ ನಾಲ್ವರು ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ. ಈ ಕುರಿತು ಸ್ವತಃ ಗುಂಡೂರಾವ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಒಬ್ಬರು ಪೊಲೀಸ್ ಸಿಬ್ಬಂದಿ, ಒಬ್ಬ ಗನ್‌ಮ್ಯಾನ್ ಹಾಗೂ ಮನೆಯಲ್ಲಿ ಇಬ್ಬರು ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ಮಾಹಿತಿ ನೀಡಿದ್ದಾರೆ. ಸಿಬ್ಬಂದಿಗಳಿಗೆ ಸೋಂಕು ಪತ್ತೆಯಾದ ಹಿನ್ನೆಲೆ ದಿನೇಶ್ ಗುಂಡೂರಾವ್, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊರೊನಾ ಪರೀಕ್ಷೆ ಮಾಡಲಾಗಿದೆ. ಎಲ್ಲರ ವರದಿ ನೆಗಿಟಿವ್ ಬಂದಿದೆ ಎಂದು ಗುಂಡೂರಾವ್ ಮಾಹಿತಿ ನೀಡಿದ್ದಾರೆ. ಅಲ್ಲದೆ ಮುನ್ನೆಚ್ಚರಿಕೆಯಿಂದಾಗಿ ಸರ್ಕಾರದ ನಿಯಮಗಳಂತೆ ಹದಿನಾಲ್ಕು ದಿನಗಳ ಕಾಲ ಹೋಮ್‌ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಕಾಂಗ್ರೆಸ್ ಮಾಜಿ ಸಚಿವ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸ್ವತಃ ಹೋಂ ಕ್ವಾರಂಟೈನ್‌ನಲ್ಲಿ ಸಿದ್ದರಾಮಯ್ಯ

Tue Jul 7 , 2020
ಮಾಜಿ ಸಿಎಂ ಸಿದ್ದರಾಮಯ್ಯ ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಸಂಪರ್ಕದಿಂದ ದೂರವಿರಲು ಸಿದ್ದರಾಮಯ್ಯ ಮೈಸೂರು ಸಮೀಪವಿರುವ ಫಾರ್ಮ್ ಹೌಸ್ ಗೆ ತೆರಳಿದ್ದಾರೆ. ತಮ್ಮ ಪುತ್ರ ಡಾ.ಯತೀಂದ್ರ ಅವರ ಸಲಹೆಯ ಮೇರೆಗೆ ಸಾರ್ವಜನಿಕ ಸಂಪರ್ಕದಿಂದ ದೂರ ಉಳಿದಿದ್ದಾರಷ್ಟೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಸಿದ್ದರಾಮಯ್ಯ ಸಕ್ರಿಯವಾಗಿದ್ದಾರೆ. ಕೊರೋನಾ ವಿರುದ್ಧ ಹೋರಾಡಲು ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಕೈಗೊಂಡ […]

Advertisement

Wordpress Social Share Plugin powered by Ultimatelysocial